ನವದೆಹಲಿ, 30 ಜುಲೈ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 2, 2025 ರಂದು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ. ಈ ಮೂಲಕ 9.7 ಕೋಟಿ ರೈತರಿಗೆ ಒಟ್ಟು ₹20,500 ಕೋಟಿ ಮೊತ್ತವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.
ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಬುಧವಾರ ಉನ್ನತ ಮಟ್ಟದ ಸಭೆ ನಡೆಸಿ, ಕಾರ್ಯಕ್ರಮದ ಸಿದ್ಧತೆಗಳು ಹಾಗೂ ಹೆಚ್ಚಿನ ಸಂಖ್ಯೆಯ ರೈತರಿಗೆ ಪ್ರಯೋಜನ ನೀಡುವ ಉದ್ದೇಶದಿಂದ ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಸಿದರು.
ದೇಶದಾದ್ಯಂತ 731 ಕೃಷಿ ವಿಜ್ಞಾನ ಕೇಂದ್ರಗಳು, ಐಸಿಎಆರ್, ಕೃಷಿ ವಿಶ್ವವಿದ್ಯಾಲಯಗಳ ಡೈರೆಕ್ಟರ್‌ಗಳು ಮತ್ತು ಕುಲಪತಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa