ಕಮ್ಚಟ್ಕಾ, 30 ಜುಲೈ (ಹಿ.ಸ.) :
ಆ್ಯಂಕರ್ : ರಷ್ಯಾದ ಪೂರ್ವ ಕರಾವಳಿ ಪ್ರದೇಶದಲ್ಲಿ 8.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ನಂತರ ಪೆಸಿಫಿಕ್ ಮಹಾಸಾಗರದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಯಿತು.
ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ಪ್ರಕಾರ, ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದ ಬಳಿ 8.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.
ಕಳೆದ ಕೆಲವು ದಶಕಗಳಲ್ಲಿ ಇದು ಅತ್ಯಂತ ಪ್ರಬಲ ಭೂಕಂಪವಾಗಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಜಪಾನ್ ಕರಾವಳಿಯನ್ನು ಅಪಾಯಕಾರಿ ಸುನಾಮಿ ಅಲೆಗಳು ತಲುಪುವ ಸಾಧ್ಯತೆಯಿದೆ.
ಜಪಾನ್ ಸರ್ಕಾರವು ತುರ್ತು ಎಚ್ಚರಿಕೆಯನ್ನು ಸಹ ಹೊರಡಿಸಿದ್ದು, ಕರಾವಳಿ ಪ್ರದೇಶಗಳನ್ನು ತಕ್ಷಣವೇ ತೊರೆಯುವಂತೆ ಸರ್ಕಾರ ಜನರಿಗೆ ಆದೇಶಿಸಿದೆ. ಅಲಾಸ್ಕಾ ಸೇರಿದಂತೆ ಹಲವು ಪ್ರದೇಶಗಳಿಗೆ ಯುಎಸ್ ಸುನಾಮಿ ಎಚ್ಚರಿಕೆಯನ್ನು ಸಹ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa