ದಕ್ಷಿಣ ಆಫ್ರಿಕಾದ ವಿರುದ್ಧ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಮೆಲ್ಬೋರ್ನ್, 30 ಜುಲೈ (ಹಿ.ಸ.) : ಆ್ಯಂಕರ್ : ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ. ಯುವ ಆಲ್‌ರೌಂಡರ್ ಮಿಚೆಲ್ ಓವನ್ ಮೊದಲಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮಾರ್ನಸ್ ಲ್ಯಾಬುಶೇನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಸ್ಟೀ
Team


ಮೆಲ್ಬೋರ್ನ್, 30 ಜುಲೈ (ಹಿ.ಸ.) :

ಆ್ಯಂಕರ್ : ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟವಾಗಿದೆ.

ಯುವ ಆಲ್‌ರೌಂಡರ್ ಮಿಚೆಲ್ ಓವನ್ ಮೊದಲಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮಾರ್ನಸ್ ಲ್ಯಾಬುಶೇನ್ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ಸ್ಟೀವ್ ಸ್ಮಿತ್ ಮತ್ತು ಮ್ಯಾಕ್ಸ್‌ವೆಲ್ ನಿವೃತ್ತಿಯ ನಂತರದ ಈ ಪ್ರಮುಖ ಬದಲಾವಣೆಗಳಲ್ಲಿ, ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಮಿಚೆಲ್ ಮಾರ್ಷ್ ನಾಯಕತ್ವ ವಹಿಸಲಿದ್ದಾರೆ.

ಟ್ರಾವಿಸ್ ಹೆಡ್ ಮತ್ತು ಹ್ಯಾಜಲ್‌ವುಡ್ ತಂಡಕ್ಕೆ ಮರಳಿದ್ದು, ಲ್ಯಾನ್ಸ್ ಮೋರಿಸ್ ಕೂಡ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಾರ್ಜ್ ಬೈಲಿ ಅವರು ತಂಡದ ಆಯ್ಕೆ ಕುರಿತು ಸಂತೋಷ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande