ಮಾನವ ಕಳ್ಳ ಸಾಗಾಣಿಕೆ ತಡೆಗೆ ಪ್ರತಿಯೊಬ್ಬರೂ ಪ್ರಯತ್ನಿಸಬೇಕು : ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ, 30 ಜುಲೈ (ಹಿ.ಸ.) : ಆ್ಯಂಕರ್ : ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಮಾನವ ಕಳ್ಳ ಸಾಗಾಣಿಕೆ ತಡೆಗೆ ಪ್ರತಿಯೊಬ್ಬರೂ ಪ್ರಯತ್ನಿಸಬೇಕು : ನ್ಯಾ.ರಾಜೇಶ್ ಎನ್.ಹೊಸಮನೆ


ಮಾನವ ಕಳ್ಳ ಸಾಗಾಣಿಕೆ ತಡೆಗೆ ಪ್ರತಿಯೊಬ್ಬರೂ ಪ್ರಯತ್ನಿಸಬೇಕು : ನ್ಯಾ.ರಾಜೇಶ್ ಎನ್.ಹೊಸಮನೆ


ಮಾನವ ಕಳ್ಳ ಸಾಗಾಣಿಕೆ ತಡೆಗೆ ಪ್ರತಿಯೊಬ್ಬರೂ ಪ್ರಯತ್ನಿಸಬೇಕು : ನ್ಯಾ.ರಾಜೇಶ್ ಎನ್.ಹೊಸಮನೆ


ಬಳ್ಳಾರಿ, 30 ಜುಲೈ (ಹಿ.ಸ.) :

ಆ್ಯಂಕರ್ : ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ `ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ಯ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ನ ನಜೀರ್ ಸಾಬ್ ಸಭಾಗಂಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವರನ್ನು ಮಾರಾಟ ಮಾಡಲು ಮತ್ತು ಕೊಂಡುಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ. ಸಮಾಜದಲ್ಲಿ ಇದೀಗ ಮಾನವ ಕಳ್ಳ ಸಾಗಾಣಿಕೆಯು ಬಹುದೊಡ್ಡ ಸಮಸ್ಯೆಯಾಗಿ ಬೆಳೆದಿದೆ. ಅದರಲ್ಲೂ ಮಾನವ ಕಳ್ಳ ಸಾಗಾಣಿಕೆಗೆ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಬಲಿಯಾಗುತ್ತಿದ್ದಾರೆ ಎಂದರು.

ಬಡತನ, ನಿರುದ್ಯೋಗ, ತಂದೆ-ತಾಯಿಗಳಿಗೆ ವಿದ್ಯಾಭ್ಯಾಸದ ಕೊರತೆ ಇವೆಲ್ಲವೂ ಮಾನವ ಕಳ್ಳ ಸಾಗಾಣಿಕೆಗೆ ದಾರಿಯಾಗುತ್ತದೆ. ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಲ್ಲಿ ಮಕ್ಕಳು ಗೈರಾಗಿದ್ದಲ್ಲಿ ಹಾಜರಾತಿ ನೀಡದೇ, ಮನೆ ಭೇಟಿ ನೀಡಿ ವಾಸ್ತವಾಂಶವನ್ನು ತಿಳಿಯಬೇಕು ಎಂದರು.

ಜಿಲ್ಲಾ ಪಂಚಾಯತ್‍ನ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅವರು ಅಧ್ಯಕ್ಷತೆ ವಹಿಸಿ, ಸಮಾಜದಲ್ಲಿನ ಅಪ್ರಾಪ್ತ ಮಕ್ಕಳು, ಮಹಿಳೆಯರು ಸೇರಿದಂತೆ ವ್ಯಕ್ತಿಗಳನ್ನು ಕಳ್ಳ ಸಾಗಾಣಿಕೆ ಮಾಡಿ ಲೈಂಗಿಕ ಶೋಷಣೆ, ಭಿಕ್ಷಾಟನೆ, ಜೀತ, ಬಾಲ ಕಾರ್ಮಿಕತೆ, ಅಂಗಾಂಗ ಕಸಿ, ಬಾಲ್ಯ ವಿವಾಹ ಮತ್ತು ವೇಶ್ಯೆವಾಟಿಕೆಗಳಲ್ಲಿ ಬಳಸಿಕೊಳ್ಳಲಾಗುತ್ತಿದೆ. ಈ ಕುರಿತು ಸಾರ್ವಜನಿಕರಲ್ಲಿ ಕಾನೂನು ಮತ್ತು ಶಿಕ್ಷೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ ಅವರು, ಮಾನವ ಕಳ್ಳ ಸಾಗಾಣಿಕೆಯು ಸಮಾಜದ ಕಪ್ಪು ಚುಕ್ಕೆಯಾಗಿದೆ. ವಿದ್ಯಾವಂತರೇ ಮಾನವಕಳ್ಳ ಸಾಗಾಣಿಕೆಯಲ್ಲಿ ತೊಡಗಿರುವುದು ವಿಷಾದನೀಯ ಎಂದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ವಕೀಲೆ ತ್ರಿವೇಣಿ ಪತ್ತಾರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ, `ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ’ಯ ಕುರಿತು ವಿಶೇಷ ಉಪನ್ಯಾಸ ನೀಡಿದರು.

ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸವಿತ. ಸಿ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಭಾಷಣ ಮಾಡಿದರು.

ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಹನುಮಂತಪ್ಪ, ಬಳ್ಳಾರಿ (ನಗರ) ಹಾಗೂ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೋಹನ್ ಕುಮಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ್ ರಾವ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande