ರಣತೂರದಲ್ಲಿ ಗೊಬ್ಬರ ವಿತರಣೆ : ಪೊಲೀಸ್ ಭದ್ರತೆಯಲ್ಲಿ ಹಂಚಿಕೆ, ಶಾಸಕರ ಪರಿಶೀಲನೆ
ಗದಗ, 30 ಜುಲೈ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಮುಂದುವರೆದ ಯೂರಿಯಾ ಗೊಬ್ಬರದ ಕೊರತೆಯಿಂದ ರೈತರು ಪರದಾಡುವ ಸ್ಥಿತಿ ಎದುರಿಸುತ್ತಿದ್ದಾರೆ. ಈ ನಡುವೆ ಶಿರಹಟ್ಟಿ ತಾಲೂಕಿನ ರಣತೂರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ರೈತರಿಗೆ ಯೂರಿಯಾ ಗೊಬ್ಬರ ವಿತರಣೆ ನಡೆಯಿತು. ಈ ಹಿಂದೆ
ಪೋಟೋ


ಗದಗ, 30 ಜುಲೈ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯಲ್ಲಿ ಮುಂದುವರೆದ ಯೂರಿಯಾ ಗೊಬ್ಬರದ ಕೊರತೆಯಿಂದ ರೈತರು ಪರದಾಡುವ ಸ್ಥಿತಿ ಎದುರಿಸುತ್ತಿದ್ದಾರೆ. ಈ ನಡುವೆ ಶಿರಹಟ್ಟಿ ತಾಲೂಕಿನ ರಣತೂರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ರೈತರಿಗೆ ಯೂರಿಯಾ ಗೊಬ್ಬರ ವಿತರಣೆ ನಡೆಯಿತು. ಈ ಹಿಂದೆ ಗಲಾಟೆ ಸಂಭವಿಸಿದ ಹಿನ್ನೆಲೆಯಲ್ಲಿ ಭಾರಿ ಪೊಲೀಸ್ ಭದ್ರತೆಯೊಂದಿಗೆ ಗೊಬ್ಬರ ವಿತರಣೆ ಮಾಡಲಾಯಿತು.

ಈ ಸಂದರ್ಭ ಶಿರಹಟ್ಟಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಅವರು ಸ್ಥಳಕ್ಕೆ ಭೇಟಿ ನೀಡಿ ವಿತರಣೆ ಕ್ರಮವನ್ನು ಪರಿಶೀಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ರೈತರಿಗೆ ನಿಗದಿತ ಸಮಯದಲ್ಲಿ ಗೊಬ್ಬರ ವಿತರಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಗದಗ ಸೇರಿದಂತೆ ಶಿರಹಟ್ಟಿ ಮತಕ್ಷೇತ್ರದ ಭಾಗಗಳಲ್ಲಿ ಗೊಬ್ಬರದ ಅಭಾವ ತೀವ್ರವಾಗಿದೆ. ರೈತರು ಆತಂಕದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಗೊಬ್ಬರಕ್ಕಾಗಿ ನೂರಾರು ರೈತರು ಕ್ಯೂ ಸಾಲಿನಲ್ಲಿ ನಿಂತು ತೀವ್ರ ತಾಪಮಾನ ಹಾಗೂ ಮಳೆಯ ನಡುವೆಯೂ ತಾಳ್ಮೆಯಿಂದ ಗೊಬ್ಬರಕ್ಕಾಗಿ ಕಾಯುತ್ತಿರುವುದು ದಯನೀಯವಾಗಿದೆ. ಸರ್ಕಾರ ಗೊಬ್ಬರ ಪೂರೈಕೆ ವ್ಯವಸ್ಥೆ ಸುಧಾರಿಸಲು ತ್ವರಿತ ಕ್ರಮ ಕೈಗೊಳ್ಳಬೇಕಾಗಿದೆ ಎಂಬುದು ರೈತ ಸಮುದಾಯದ ಒತ್ತಾಯವಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande