ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿ : ಮಧು ಎಚ್.ಎಂ
ಶಿವಮೊಗ್ಗ, 30 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಜಾರಿಗೆ ಬಂದಿದ್ದು, ಫಲಾನುಭವಿಗಳಲ್ಲಿ ಸಂತೋಷದ ಪ್ರತಿಕ್ರಿಯೆ ಕಂಡುಬಂದಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಧು ಎಚ್.ಎಂ ಹೇಳಿದರ
Meeting


ಶಿವಮೊಗ್ಗ, 30 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಶಿವಮೊಗ್ಗ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ಜಾರಿಗೆ ಬಂದಿದ್ದು, ಫಲಾನುಭವಿಗಳಲ್ಲಿ ಸಂತೋಷದ ಪ್ರತಿಕ್ರಿಯೆ ಕಂಡುಬಂದಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಧು ಎಚ್.ಎಂ ಹೇಳಿದರು.

ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ 1.07 ಲಕ್ಷ ಮಹಿಳೆಯರು ನೋಂದಾಯಿತರಾಗಿದ್ದು, 2044 ಜನ IT/GST ಪಾವತಿದಾರರು ಸೇರಿದ್ದಾರೆ. ತಾಂತ್ರಿಕ ದೋಷಗಳಿಂದ ಕೆಲವರಿಗೆ ಹಣ ಜಮೆಯಾಗದಿರುವ ಕುರಿತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆಯಡಿ ಜುಲೈ ತಿಂಗಳಲ್ಲಿ ₹10,077 ಕೋಟಿ ಬಿಡುಗಡೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2024-25ರಲ್ಲಿ ₹1078 ಕೋಟಿ ಮತ್ತು 2025-26ರಲ್ಲಿ ₹1025 ಕೋಟಿ ಸಬ್ಸಿಡಿ ನೀಡಲಾಗಿದೆ. ತಾಲೂಕಿನಲ್ಲಿ ಶಕ್ತಿ ಯೋಜನೆಯ ಲಾಭದಿಂದ ಶೇ.61.5 ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande