ಮಧ್ಯ ಪ್ರದೇಶದಲ್ಲಿ ಧಾರಾಕಾರ ಮಳೆ : ಜನಜೀವನ ಅಸ್ತವ್ಯಸ್ತ
ಭೋಪಾಲ್, 30 ಜುಲೈ (ಹಿ.ಸ.) : ಆ್ಯಂಕರ್ : ಮಧ್ಯ ಪ್ರದೇಶದಲ್ಲಿ ಮುಂದುವರೆದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅಶೋಕನಗರ, ಶಿಯೋಪುರ್, ವಿದಿಶಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಗುಣ ಜಿಲ್ಲೆಯ ಕಲೋರಾ ಗ್ರಾಮದಲ್ಲಿ ಅಣೆಕಟ್ಟು ಒಡೆದು ಸುತ್ತಮುತ್ತಲ ಹಳ್ಳಿಗಳಲ
Rain


ಭೋಪಾಲ್, 30 ಜುಲೈ (ಹಿ.ಸ.) :

ಆ್ಯಂಕರ್ : ಮಧ್ಯ ಪ್ರದೇಶದಲ್ಲಿ ಮುಂದುವರೆದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಅಶೋಕನಗರ, ಶಿಯೋಪುರ್, ವಿದಿಶಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಗುಣ ಜಿಲ್ಲೆಯ ಕಲೋರಾ ಗ್ರಾಮದಲ್ಲಿ ಅಣೆಕಟ್ಟು ಒಡೆದು ಸುತ್ತಮುತ್ತಲ ಹಳ್ಳಿಗಳಲ್ಲಿ ನೀರು ನುಗ್ಗಿದ್ದು, ಸೇನೆಯ ಸಹಾಯದಿಂದ ರಕ್ಷಣಾ ಕಾರ್ಯಗಳು ನಡೆಯುತ್ತಿವೆ.

ವಿದಿಶಾದಲ್ಲಿ ಮನೆಯೊಂದು ಕುಸಿದು ಮಹಿಳೆ ಸಾವನ್ನಪ್ಪಿದ್ದು, ಮಕ್ಕಳಿಬ್ಬರನ್ನು ಪ್ರವಾಹದಿಂದ ರಕ್ಷಿಸಲಾಗಿದೆ.

ತವಾ, ಓಂಕಾರೇಶ್ವರ ಸೇರಿದಂತೆ ಹಲವಾರು ಅಣೆಕಟ್ಟುಗಳಿಂದ ನೀರು ಬಿಡುಗಡೆ ಮಾಡಲಾಗಿದೆ. ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಇನ್ನೂ ಮಳೆ ಮುಂದುವರಿಯುವ ಎಚ್ಚರಿಕೆ ನೀಡಿದ್ದು, ಜನತೆಗೆ ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande