ಬಾಲ್ಯ ವಿವಾಹ ಹಾಗೂ ಪೋಕ್ಸೋ ನಿರ್ಮೂಲನೆಗೆ ನ್ಯಾಯಾಧೀಶ ಎಂ.ವಿಜಯ್ ಕರೆ
ಚಿತ್ರದುರ್ಗ, 30 ಜುಲೈ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಪೋಕ್ಸೋ ಹಾಗೂ ಬಾಲ್ಯವಿವಾಹ ಪ್ರಕರಣದ ಪಿಡುಗನ್ನು ನಿರ್ಮೂಲನೆ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕರೆ
Foxso


ಚಿತ್ರದುರ್ಗ, 30 ಜುಲೈ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಪೋಕ್ಸೋ ಹಾಗೂ ಬಾಲ್ಯವಿವಾಹ ಪ್ರಕರಣದ ಪಿಡುಗನ್ನು ನಿರ್ಮೂಲನೆ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಕರೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಇಂಟನ್ರ್ಯಾಷನಲ್ ಜಸ್ಟಿಸ್ ಮಿಷನ್ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ, ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆ ಕಾವಲು ಸಮಿತಿ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಗ್ರಾಮಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಸಿಬ್ಬಂದಿ ಸೂಕ್ತ ಮಾರ್ಗದರ್ಶನ ನೀಡಬೇಕು. ಮಕ್ಕಳ ಗ್ರಾಮಸಭೆ, ಮಹಿಳಾ ಮತ್ತು ಮಕ್ಕಳ ಸಂರಕ್ಷಣೆ ಕುರಿತು ಸಭೆಗಳಲ್ಲಿ ಅಧಿಕಾರಿಗಳು ಭಾಗವಹಿಸಿ, ಪೋಕ್ಸೋ ಹಾಗೂ ಬಾಲ್ಯವಿವಾಹ ಪ್ರಕರಣಗಳ ಜರುಗದಂತೆ ಗ್ರಾಮಮಟ್ಟದಲ್ಲಿ ಬುಡಸಮೇತ ಕಿತ್ತೊಗೆಯಲು ಪ್ರಯತ್ನಿಸಬೇಕು ಎಂದು ನ್ಯಾಯಾಧೀಶ ಎಂ.ವಿಜಯ್ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪೋಕ್ಸೋ ಮತ್ತು ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟುವ ಅಧಿಕಾರಿಗಳು ಸಭೆ ನಡೆಸಿ, ಸಲಹೆ ಸೂಚನೆ ಹಾಗೂ ನಿರ್ದೇಶನಗಳನ್ನು ನೀಡಲಾಗಿದೆ. ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅರಿವು ಮೂಡಿಸಲಾಗುತ್ತಿದೆ. ಆದಾಗ್ಯೂ ಗ್ರಾಮಮಟ್ಟದ ಅಧಿಕಾರಿಗಳಲ್ಲಿ ಸಮನ್ವಯದ ಕೊರತೆ ಇದೆ. ಪ್ರಕರಣ ನಡೆದು ಮೂರು-ನಾಲ್ಕು ದಿನಗಳಾದರೂ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಿಲ್ಲ. ಕೆಲ ಪ್ರಕರಣಗಳಲ್ಲಿ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡದೇ ನಿರ್ಲಕ್ಷ ವಹಿಸುವುದು ಕಂಡು ಬಂದಿದೆ. ಇನ್ನೂ ಮುಂದೆ ಪ್ರಕರಣಗಳ ವರದಿ ನೀಡದ, ನಿರ್ಲಕ್ಷ ವಹಿಸುವ ಅಧಿಕಾರಿಗಳನ್ನೇ ನೇರವಾಗಿ ಹೊಣೆ ಮಾಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಧೀಶ ಎಂ.ವಿಜಯ್ ಎಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande