ವಿಜಯಪುರ, 30 ಜುಲೈ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ತೇರದಾಳ ಮತಕ್ಷೇತ್ರದ ನಂದಗಾಂವ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಘಟಪ್ರಭಾ ನದಿಯ ಪ್ರವಾಹ ಪೀಡಿತ ಸ್ಥಳಗಳಿಗೆ ತೆರಳಲು ಹಾಗೂ ಜನರ ಅನುಕೂಲಕ್ಕಾಗಿ ಹೊಸ ದೋಣಿ ಒದಗಿಸಿ ಚಾಲನೆ ನೀಡಲಾಯಿತು. ಶಾಸಕ ಸಿದ್ದು ಸವದಿ ,ಹೊಸ ಬೋಟ್ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ವೀಕ್ಷಿಸಿದರು. ನಂತರ ಪ್ರವಾಹ ಪೀಡಿತ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande