ಬೆಂಗಳೂರು, 30 ಜುಲೈ (ಹಿ.ಸ.) :
ಆ್ಯಂಕರ್ : ಕಾರ್ಮಿಕ ಸಚಿವ ಸಚಿವ ಸಂತೋಷ್ ಎಸ್ ಲಾಡ್ ಅವರು, ರಾಯಚೂರಿನ ಆರ್‌ಟಿಪಿಎಸ್, ವೈಟಿಪಿಎಸ್, ಕುಡುತಿನಿಯ ಬಳ್ಳಾರಿ ಥರ್ಮಲ್ ಪವರ್ ಸ್ಟೇಷನ್ (ಬಿಟಿಪಿಎಸ್) ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಕಾರ್ಮಿಕರ ಸಮಸ್ಯೆಗಳ ಕುರಿತು ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರೋಹಿಣಿ ಸಿಂಧೂರಿ , ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತರಾದ ಮಂಜುನಾಥ್ ಉಪ ಕಾರ್ಮಿಕ ಆಯುಕ್ತರಾದ ವೆಂಕಟೇಶ್ ಸಿಂದಿಹಟ್ಟಿ, ಕಾರ್ಖಾನೆಗಳು ಹಾಗೂ ಬಾಯ್ಲರ್ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್, ಇಂಧನ ಇಲಾಖೆಯ ಅಪರ ಕಾರ್ಯದರ್ಶಿಗಳು ಇಂಧನ ಇಲಾಖೆಯ ಅಧಿಕಾರಿಗಳು, ನೌಕರರ ಸಂಘದ ಪ್ರಮುಖರು, ಗುತ್ತಿಗೆದಾರರು ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa