ನವದೆಹಲಿ, 30 ಜುಲೈ (ಹಿ.ಸ.) :
ಆ್ಯಂಕರ್ : ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಸಲ್ಲಿಸಲು ಅವಕಾಶ ನೀಡಿರುವ ಕೊನೆಯ ದಿನಾಂಕವನ್ನು ಜುಲೈ 31 ರಿಂದ ಆಗಸ್ಟ್ 15, 2025 ರವರೆಗೆ ವಿಸ್ತರಿಸಲಾಗಿದೆ ಎಂದು ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಈ ನಾಮನಿರ್ದೇಶನಗಳು ಆನ್‌ಲೈನ್ ಮೂಲಕ ಮಾತ್ರ ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ (https://awards.gov.in) ನಲ್ಲಿ ಸಲ್ಲಿಸಬಹುದಾಗಿದೆ. ಈ ಪ್ರಕ್ರಿಯೆ 2025ರ ಮಾರ್ಚ್ 15ರಂದು ಆರಂಭವಾಗಿತ್ತು ಮತ್ತು ಮೂಲತಃ ಜುಲೈ 31ಕ್ಕೆ ಕೊನೆಗೊಳ್ಳಬೇಕಿತ್ತು.
ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ಈ ಗೌರವಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದಂದು ಘೋಷಿಸಲಾಗುತ್ತದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa