ಹುಬ್ಬಳ್ಳಿ, 30 ಜುಲೈ (ಹಿ.ಸ.) :
ಆ್ಯಂಕರ್ : ಅರಣ್ಯ ಪ್ರದೇಶಗಳಲ್ಲಿ ಸಾಕುಪ್ರಾಣಿಗಳನ್ನು ಮೇಯಿಸಲು ನಿರ್ಬಂಧ ಹೇರಲು ಅರಣ್ಯ ಸಚಿವ ಈಶ್ವರ ಖಂಡ್ರೆ ನೀಡಿರುವ ಸೂಚನೆಯನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಬೃಹತ್ತ್ ಪ್ರತಿಭಟನೆ ನಡೆಯಿತು.
ಪಟ್ಟಣದ ಮರಿಯಮ್ಮನ ವೃತ್ತದಿಂದ ತಹಸೀಲ್ದಾರ್ ಕಚೇರಿ ವರೆಗೂ ಕುರಿಗಳೊಂದಿಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಅರಣ್ಯ ಹಕ್ಕುಗಳನ್ನ ಉಳಿಸಿ, ಕುರಿಗಾಹಿಗಳ ಬದುಕು ರಕ್ಷಿಸಿ ಎಂಬ ಘೋಷಣೆಗಳನ್ನು ಹಾಕಿದರು.
ಬಳಿಕ ತಹಸೀಲ್ದಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ,
ಮುಂಬರುವ ಅಧಿವೇಶನದಲ್ಲಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ತರಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಹೋರಾಟ ಮುಂದಿನ ದಿನಗಳಲ್ಲಿ ಸ್ವಾತಂತ್ರ ಉದ್ಯಾನವನ, ಬೆಂಗಳೂರುನಲ್ಲಿ ಬೃಹತ್ ಪ್ರತಿಭಟನೆಯ ಮೂಲಕ ಮುಂದುವರಿಯಲಿದೆ ಎಂದು ಸಂಘದ ರಾಜ್ಯ ಸಂಚಾಲಕ ಸಿದ್ದು ತೇಜಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa