ಶಿವಮೊಗ್ಗ, 30 ಜುಲೈ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ತಾಲ್ಲೂಕಿನ ಗಾಜನೂರು ಡ್ಯಾಂ ಬಳಿ ಬೆಳಗಿನ ಜಾವ ಖಾಸಗಿ ಬಸ್ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಗಳೂರು-ಚಳ್ಳಕೆರೆ ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್, ರಸ್ತೆಯಲ್ಲಿ ನಿಂತಿದ್ದ ಆಂಧ್ರ ಮೂಲದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಹರ್ಷಿತ್ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ,
ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 169(A) ರಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa