ವಿಜಯಪುರ, 30 ಜುಲೈ (ಹಿ.ಸ.) :
ಆ್ಯಂಕರ್ : ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಕಿವಿಮಾತು ಹೇಳಿದರು.
ಕೊಲ್ಹಾರ ಪಟ್ಟಣದ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳಿಗೆ ಕಲ್ಪಿಸಲಾಗಿರುವ ಅಗತ್ಯ ಮೂಲಭೂತ ಸೌಲಭ್ಯಗಳು ಸೇರಿದಂತೆ ವಸತಿ ಶಾಲೆಯಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಸ್ವತ: ತಾವೇ ಊಟ ಬಡಿಸಿ ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ನಂತರ, ಮಕ್ಕಳೊಂದಿಗೆ ಸಂವಾದ ನಡೆಸಿ, ಭಯಮುಕ್ತ ಪರೀಕ್ಷೆ ಎದುರಿಸುವ ಕುರಿತು ಮಕ್ಕಳಿಗೆ ಆತ್ಮವಿಶ್ವಾಸ ಮೂಡಿಸಲು ಪ್ರಯತ್ನಿಸಿದರು.
ಈ ಸಂದರ್ಭದಲ್ಲಿ ವಸತಿ ಶಾಲೆಯ ಪ್ರಾಚಾರ್ಯರು, ಶಿಕ್ಷಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande