ಚಳ್ಳಕೆರೆ : ತಂಬಾಕು ಜಾಗೃತಿ ಕಾರ್ಯಾಚರಣೆ
ಚಳ್ಳಕೆರೆ, 30 ಜುಲೈ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬಸ್ ನಿಲ್ದಾಣದ ಹಿಂಭಾಗದಲ್ಲಿ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಬುಧವಾರ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ, ತಂಬಾಕು ಕಾರ್ಯಾಚರಣೆ ಜಾಗೃತಿ ಮೂಡಿಸಲಾಯಿತು. ಯುವ ಜನತೆಯು ಅತೀ ಹೆಚ್ಚಾ
Awareness


ಚಳ್ಳಕೆರೆ, 30 ಜುಲೈ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬಸ್ ನಿಲ್ದಾಣದ ಹಿಂಭಾಗದಲ್ಲಿ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಬುಧವಾರ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ, ತಂಬಾಕು ಕಾರ್ಯಾಚರಣೆ ಜಾಗೃತಿ ಮೂಡಿಸಲಾಯಿತು.

ಯುವ ಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತ ತಂಬಾಕು ಕಾರ್ಯಾಚರಣೆಯನ್ನು ಮಾಡಿ ಸಾರ್ವಜನಿಕರಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿಯನ್ನು ಮೂಡಿಸಲಾಯಿತು.

ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 19 ಪ್ರಕರಣ ದಾಖಲಿಸಿ ರೂ. 1750 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 07 ಪ್ರಕರಣ ದಾಖಲಿಸಿ ರೂ. 550 ದಂಡವನ್ನು ವಸೂಲಿ ಮಾಡಲಾಯಿತು.

ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಜಿಲ್ಲಾ ಸರ್ವೇಕ್ಷಣಾ ಘಟಕದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿ.ವಿಶ್ವ, ಚಳ್ಳಕೆರೆ ನಗರಸಭೆಯ ಆರೋಗ್ಯ ನಿರೀಕ್ಷಣಾಧಿಕಾರಿಳಾದ ಟಿ.ರುದ್ರಮುನಿ, ಎಸ್.ವಿ.ಸಾಗರ್ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande