ಶಾಸಕ ಯತ್ನಾಳಗೆ ಹೆದರಿ ವಿಜಯೇಂದ್ರ ಕಾರ್ಯಕ್ರಮ ಮುಂದೂಡಿಲ್ಲ : ಗುರುಲಿಂಗಪ್ಪ ಅಂಗಡಿ
ವಿಜಯಪುರ, 30 ಜುಲೈ (ಹಿ.ಸ.) : ಆ್ಯಂಕರ್ : ಬರುವ ಅಗಸ್ಟ್ 2 ರಂದು ವಿಜಯಪುರ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ವಿಜಯಪುರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ತಿಳಿಸಿದರು. ‌ ವಿಜಯಪುರ ನಗರದಲ್ಲಿ
ಬಿಜೆಪಿ


ವಿಜಯಪುರ, 30 ಜುಲೈ (ಹಿ.ಸ.) :

ಆ್ಯಂಕರ್ : ಬರುವ ಅಗಸ್ಟ್ 2 ರಂದು ವಿಜಯಪುರ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ವಿಜಯಪುರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ತಿಳಿಸಿದರು. ‌

ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಹಾಗೂ ಪ್ರಬುದ್ಧರ ಸಭೆ ಹಾಗೂ ಮುಂಬರುವ ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಚುನಾವಣೆಗಳ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಸಂಘಟನೆ ಸಭೆಗಳನ್ನು ನಡೆಸಲು ತೀರ್ಮಾನಿಸಲಾಗಿತ್ತು. ಅಂದು ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ರವರು ಬೆಂಗಳೂರಿನಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ಅಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗವಹಿಸಬೇಕಾಗಿರುವದರಿಂದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ತಿಳಿಸಿದರು.

ಇನ್ನೂ ಶಾಸಕ ಯತ್ನಾಳರಿಗೆ ಹೆದರಿ ಕಾರ್ಯಕ್ರಮ ಮುಂದೂಡಿಲ್ಲಾ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಆದಷ್ಟು ಬೇಗನೆ ಕಾರ್ಯಕ್ರಮ ನಿಗದಿ ಮಾಡಲಾಗುವದು ಎಂದರು. ಸುದ್ದಿಗೋಷ್ಠಿಯಲ್ಲಿ‌ ಬಿಜೆಪಿ ಉಪಾಧ್ಯಕ್ಷ ಮಹೀಂದ್ರ ನಾಯಕ, ಕಾರ್ಯದರ್ಶಿ ಸಾಬು ಮಾಶ್ಯಾಳ, ಈರಣ್ಣ ರಾವೂರ ಹಾಗೂ ಮಾದ್ಯಮ ವಕ್ತಾರ ವಿಜಯ ಜೋಶಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande