ಧಾರವಾಡ, 31 ಜುಲೈ (ಹಿ.ಸ.) :
ಆ್ಯಂಕರ್ : ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವ್ಯಾಪ್ತಿಗೆ ಒಳಪಡುವ ಅಳ್ನಾವರ ಪಟ್ಟಣದ ವಿದ್ಯಾನಗರದ ಅನುದಾನಿತ ನಂದೀಶ್ವರ ಕನ್ನಡ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಶಿಕ್ಷಣ ಅಧಿನಿಯಮ 1983 (1995 ರ ಕರ್ನಾಟಕ ಅಧಿನಿಯಮ-1) ರ ಸೆಕ್ಷೆನ್ 39(2) ರಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪತ್ರ ದಿನಾಂಕ: ಜುಲೈ 15, 2025 ರನ್ವಯ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಾಲೆಯ ಮಾನ್ಯತೆಯನ್ನು ಹಿಂಪಡೆದು ಅಧಿಸೂಚನೆ ಹೊರಡಿಸಿದ್ದಾರೆ.
ಆದ್ದರಿಂದ ಪಾಲಕರು ಮತ್ತು ಪೋಷಕರು ಸದರಿ ಶಾಲೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಬಾರದೆಂದು ಧಾರವಾಡ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa