ಕುಷ್ಟಗಿ, 31 ಜುಲೈ (ಹಿ.ಸ.) :
ಆ್ಯಂಕರ್ : ಕುಷ್ಟಗಿ ಪುರಸಭೆ ವತಿಯಿಂದ 2025-26ನೇ ಸಾಲಿನ ಎಸ್.ಎಫ್.ಸಿ ಶೇ.5ರ ವಿಕಲಚೇತನ ವಿದ್ಯಾರ್ಥಿಗಳಿಗೆ ಸಹಾಯಧನ ಮತ್ತು ವಿಕಲಚೇತನರಿಗೆ ಶಸ್ತ್ರಚಿಕಿತ್ಸೆಯ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಸಹಾಯಧನವನ್ನು ಪಡೆಯಲಿಚ್ಛೀಸುವ ಕುಷ್ಟಗಿ ಪಟ್ಟಣದ ವ್ಯಾಪ್ತಿಯ ವಿಕಲಚೇತನ ವಿದ್ಯಾರ್ಥಿಗಳು ಮತ್ತು ವಿಕಲಚೇತನರು ಆಗಸ್ಟ 19 ರೊಳಗಾಗಿ ಕುಷ್ಟಗಿ ಪುರಸಭೆ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಾರ್ಯಾಲಯಕ್ಕೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕುಷ್ಟಗಿಯ ಪುರಸಭೆ ಮುಖ್ಯಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್