ಗದಗ, 31 ಜುಲೈ (ಹಿ.ಸ.) :
ಆ್ಯಂಕರ್ : ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಬಿಡುವಿಲ್ಲದ ಸಂಚಾರ ನಡೆಸಿರುವ ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್ ಸರ್ಕಾರದ ನಾನಾ ಕಾಮಗಾರಿಗಳು, ಯೋಜನೆಗಳ ಅನುಷ್ಟಾನ ಹಾಗೂ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ನೆಡೆಸಿದರು.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ಮಜ್ಜುರ ಹಾಗೂ ಮಾಚೇನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿ ನೆಡೆಸಿದರು. ಈ ಹಿನ್ನೆಲೆಯಲ್ಲಿ ಮಜ್ಜುರ, ಶಿವಾಜಿ ತಾಂಡಾ, ಮಾಚೇನಹಳ್ಳಿ, ತೆಗ್ಗಿನ ಭಾವನೂರ, ನವೆಭಾವನೂರ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಜೆಜೆಎಂ ಕಾಮಗಾರಿಗಳು,ಸಂಪರ್ಕಗಳ ಗುಣಮಟ್ಟ, ಮೀಟರ್ ಅಳವಡಿಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ವಿವರವಾದ ಪರಿಶೀಲನೆ ನಡೆಸಿದರು. ಇದೆ ಸಂದರ್ಭದಲ್ಲಿ ಮನೆ ಮನೆಗಳಿಗೆ ಅಳವಡಿಸಲಾಗಿರುವ ನಳಗಳ ಸಂರ್ಪಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚೆ ಮಾಡಿದರು.
ಗ್ರಾಮಗಳ ಭೇಟಿ ವೇಳೆ , ಗುಣಮಟ್ಟದ ಕಾಮಗಾರಿ ಕೈಗೊಳ್ಳುವಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜವಾಬ್ದಾರಿ ಎಷ್ಟಿದೆಯೋ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವುದು, ಸದುಪಯೋಗ ಪಡೆದುಕೊಳ್ಳುವ ಜವಾಬ್ದಾರಿ ಸಾರ್ವಜನಿಕರ ಮೇಲೂ ಇದೆ. ಹೀಗಾಗಿ ಸಾರ್ವಜನಿಕರು ಸರ್ಕಾರದ ಭಾಗವಾಗಿ ಜವಾಬ್ದಾರಿಗಳನ್ನು ನಿಭಾಯಿಸಬೇಕು ಕಾಮಗಾರಿಗಳು ಗುಣನುಟ್ಟದಿಂದ ಆಗುವಂತೆ ನೋಡಿಕೊಳ್ಳಬೇಕಲ್ಲದೇ ಪೂರ್ಣಗೊಂಡಿರುವ ಕಾಮಗಾರಿಗಳಿಂದ ಸದುಪಯೋಗ ಪಡೆದುಕೊಳ್ಳಬೆಕೇಂದರು.
ಈ ಭೇಟಿಯಲ್ಲಿ ಶಿರಹಟ್ಟಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ ದೊಡ್ಡಮನಿ, ಸಹಾಯಕ ಎಂಜಿನಿಯರ್ ಮಲ್ಲಿಕಾರ್ಜುನ ಪಾಟೀಲ, ವಿಭಾಗೀಯ ಅಧಿಕಾರಿ ಮುನ್ನಿ ಹರಕುನಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP