ವಿಜಯಪುರ, 31 ಜುಲೈ (ಹಿ.ಸ.) :
ಆ್ಯಂಕರ್ : ಗ್ರಾಮಗಳಿಗೆ ನೀರು ಸರಬರಾಜು ಮಾಡುವ ಪೂರ್ವದಲ್ಲಿ ಓವರ್ ಹೆಡ್ ಟ್ಯಾಂಕ್ ನ್ನು ಸ್ವಚ್ಛಗೊಳಿಸಿ, ಕ್ಲೋರಿನೇಷನ್ ಮಾಡಿ, ನೀರಿನ ಗುಣಮಟ್ಟವನ್ನು ಪರೀಕ್ಷಿಸಬೇಕು. ಗ್ರಾಮಗಳಲ್ಲಿರುವ ಹಳೆಯ ಸಂಪರ್ಕಗಳನ್ನು ಕಡ್ಡಾಯವಾಗಿ ತೆರವುಗೊಳಿಸಿ ಜಲ ಜೀವನ್ ಮಿಷನ್ ಯೋಜನೆಯಡಿ ನೀಡಲಾದ ಹೊಸ ನಳ ಸಂಪರ್ಕಗಳ ಮೂಲಕ ನೀರನ್ನು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ ಅವರು ಸೂಚಿಸಿದರು.
ವಿಜಯಪುರ ತಾಲೂಕಿನ ಐನಾಪುರ, ಐನಾಪುರ ಎಲ್ ಟಿ, ಬುರಣಾಪುರ, ಮದಭಾವಿ, ಕುಮಟಗಿ, ಕಗ್ಗೋಡ, ಕಗ್ಗೋಡ ಎಲ್‌ಟಿ, ದೇವರ ಹಿಪ್ಪರಗಿ ತಾಲೂಕಿನಪಡಗಾನೂರ, ಪಡಗಾನೂರ ಎಲ್ ಟಿ, ಕೊಂಡಗೂಳಿ, ಹಂಚಲಿ ಮತ್ತು ಕೋರವಾರ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಪ್ರತಿ ಮನೆಗಳ ಕಾಮಗಾರಿಗಳ ಕುರಿತು ಸ್ಥಳ ಪರಿಶೀಲನೆ ನಡೆಸಿದ ಅವರು ಜಲಮಿಷನ್ ಯೋಜನೆಯಡಿ ಪ್ರತಿ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ನಿಭಾಯಿಸಬೇಕು. ಪ್ರತಿನಿತ್ಯ ಮನೆ-ಮನೆಗೂ ಸಾಕಷ್ಟು ಪ್ರಮಾಣ ನೀರನ್ನು ಸರಬರಾಜು ಮಾಡಬೇಕು ಎಂದು ಸಂಬ0ಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಇದೇ ವೇಳೆ ಸಾರ್ವಜನಿಕರೊಂದಿಗೆ ಮಾತನಾಡಿ, ಜಲ ಜೀವನ ಮಿಷನ್‌ಗಳಡಿ ಕಾಮಗಾರಿ ಗುಣಮಟ್ಟ ಮತ್ತು ಸ್ವಚ್ಚತೆ ಕಾಪಾಡಿಕೊಳ್ಳುವುದು ಮತ್ತು ಅದರ ಸದುಪಯೋಗಪಡಿಸಿಕೊಳ್ಳುವ ಜವಬ್ದಾರಿ ಸಾರ್ವಜನಿಕರ ಮೇಲೆ ಇದೆ. ಆದ್ದರಿಂದ ನೀರನ್ನು ಪೋಲಾಗದಂತೆ ಮಿತವಾಗಿ ಬಳಸಬೇಕು ಎಂದು ಹೇಳಿದ ಅವರು, ನಳಗಳಲ್ಲಿ ಪ್ರತಿದಿನ ನೀರು ಬರುವುದರ ಬಗ್ಗೆ ಹಾಗೂ ಸಾಕಷ್ಟು ಪ್ರಮಾಣದಲ್ಲಿ ಪೂರೈಕೆ ಆಗುತ್ತಿರುವ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಿದರು.
ಬೈ-ಪಾಸ್ ಆದಂತಹ ಸಂಪರ್ಕಗಳನ್ನು ಗ್ರಾಮ ಪಂಚಾಯಿತಿಯವರು ಕೂಡಲೇ ಮರು ಜೋಡಣೆ ಮಾಡಿ, ಈ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೂ ಸಹ ಮೇಲ್ವಿಚಾರಣೆ ಮಾಡಲು ಅವರು ಸೂಚಿಸಿದರು.
ಗ್ರಾಮಗಳಲ್ಲಿ ಇರುವಂತಹ ಶಾಲೆ ಮತ್ತು ಅಂಗನವಾಡಿ ಕಟ್ಟಡಗಳಿಗೆ ನೀರಿನ ಸಂಪರ್ಕ ನೀಡಿರುವ ಕುರಿತು ಖಾತ್ರಿಪಡಿಸಿಕೊಂಡ ಅವರು ನೀರನ್ನು ಪೂರೈಕೆ ಮಾಡುವ ಪೂರ್ವದಲ್ಲಿ ನಿಯಮಿತವಾಗಿ ಎಫ್‌ಟಿಕೆ ಮೂಲಕ ಪರೀಕ್ಷಿಸಲು ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಗ್ರಾಮದಲ್ಲಿರುವ ಓವರ್ ಹೆಡ್ ಟ್ಯಾಂಕ್ ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲು ಹಾಗೂ ಕ್ಲೋರಿನೇಷನ್ ಮಾಡಿ, ಅದರ ವರದಿ ಸಂಭ0ಧಪಟ್ಟ ವಹಿಯಲ್ಲಿ ದಾಖಲಿಸಬೇಕು. ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದನ್ನು ಖಚಿತಪಡಿಸಿಕೊಳ್ಳಿ. ಯಾವುದೇ ಪರಿಸ್ಥಿತಿಯಲ್ಲಯೂ ಸಹ ನೀರು ಕಲುಷಿತವಾಗದಂತೆ ಎಚ್ಚರವಹಿಸಬೇಕು.ಬೋರ್ವೆಲ್ ಪಾಯಿಂಟ್ಗಳು ಮತ್ತು ವಾಲ್‌ಗಳು ಸ್ವಚ್ಛವಾಗಿರುವಂತೆ ನಿರ್ವಹಣೆ ಮಾಡಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಬಾಕಿ ಇರುವ ರಸ್ತೆ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಪ್ರತಿ ಮನೆಗೆ ನೀರು ಸರಿಯಾದ ಪ್ರಮಾಣದಲ್ಲಿ ಬರುವುದನ್ನು ಖಾತರಿಪಡಿಸಿಕೊಂಡು ನಂತರ ಅದನ್ನು ಗ್ರಾಮ ಪಂಚಾಯತಿಗೆ ಹಸ್ತಾಂತರಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಪ್ರತಿ ಮನೆ-ಮನೆಗಳಿಗೆ ನೀರು ಸರಬರಾಜು ಮಾಡಲು ಸಂಬ0ಧಪಟ್ಟ ಪಂಚಾಯತ ಅಭಿವೃಧ್ಧಿ ಅಧಿಕಾರಿ, ಶಾಖಾಧಿಕಾರಿಗಳು ಜಂಟಿಯಾಗಿ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲು ಅವರು ತಿಳಿಸಿದರು.
ಗ್ರಾಮಗಳಲ್ಲಿನ ಎಲ್ಲಾ ಮನೆಗೂ ನೀರು ಸರಿಯಾದ ಪ್ರಮಾಣದಲ್ಲಿ ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು. ಜಲಧಾರೆ ಯೋಜನೆ ಪೂರ್ಣಗೊಂಡಲ್ಲಿ ನದಿಗಳಿಂದ ನೀರನ್ನು ಹೆಚ್ಚು ಪ್ರಮಾಣದಲ್ಲಿ ಗ್ರಾಮಗಳಿಗೆ ಪೂರೈಕೆ ಮಾಡುವುದರಿಂದ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಕಡಿಮೆಯಾಗುವುದು ಎಂದು ತಿಳಿಸಿದರು. ಯಾವುದೇ ದುರಸಿ ಕಾರ್ಯಗಳು ಕಂಡು ಬ0ದಲ್ಲಿ, ಕೂಡಲೇ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ನೀರು ಕಲುಷಿತಗೊಳ್ಳುವ ಸಾಧ್ಯತೆಗಳು ಜಾಸ್ತಿ ಇರುತ್ತದೆ. ಗ್ರಾಮ ಪಂಚಾಯಿತಿಗೆ ಯೋಜನೆ ಹಸ್ತಾಂತರಗೊAಡ ನಂತರ ಯೋಜನೆಯನ್ನು ಸರಿಯಾಗಿ ನಿರ್ವಹಣೆ ಮಾಡುವುದು ಗ್ರಾಮ ಪಂಚಾಯತಿಯ ಜವಾಬ್ದಾರಿಯಾಗಿದೆ ಎಂದು ಸಂಬ0ಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ನಂತರ ಕೋರವಾರ ಗ್ರಾಮ ಪಂಚಾಯತಿ ಹತ್ತಿರ ಇರುವ ಜಲಧಾರೆ ಸ್ಕೀಮ್ 2 ಯೋಜನೆಯ ಜಿವಿಪಿಆರ್ ಏಜನ್ಸಿಯ ಯಾರ್ಡಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಪ್ರತಿ ವರ್ಷ ಬೇಸಿಗೆ ಸಮಯದಲ್ಲಿ ಅತಿಯಾದ ನೀರಿನ ಕೊರತೆಯ ಸಮಸ್ಯೆಯನ್ನು ಎದುರಿಸುವುದರಿಂದ ಜಲಧಾರೆ ಅತೀ ಮುಖ್ಯವಾದ ಯೋಜನೆಯಾಗಿದೆ. ಆದಷ್ಟು ಬೇಗ ಗುಣಮಟ್ಟ ನಿರ್ವಹಣೆ ಮಾಡಿ, ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಾಬು ರಾಠೋಡ, ದೇವರ ಹಿಪ್ಪರಗಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಾರತಿ ಚಲುವಯ್ಯ, ಸಹಾಯಕ ನಿರ್ದೇಶಕರಾದ ಶಿವಾನಂದ ಮೂಲಿಮನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ತಾರಾನಾಥ ರಾಠೋಡ, ಸಂತೋಷ ಪಾಟೀಲ, ಸೆಕ್ಷನ್ ಆಫೀಸರ್ ಹಣಮಂತ ಸಾರವಾಡ, ಶಾಖಾಧಿಕಾರಿಗಳಾದ ಶಿವಪುತ್ರಪ್ಪಾ ಮಾನಶೆಟ್ಟಿ, ಮದಭಾವಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಆರ್ ಕಟ್ಟಿ, ಕುಮಟಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ರೇಖಾ ಪವಾರ, ಕೋರವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾಶಿನಾಥ ಕಡಕಬಾವಿ, ಕೊಂಡಗೂಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಕ್ಕಮಹಾದೇವಿ ಅಂಗಡಿ, ಜಿಲ್ಲಾ ಯೋಜನಾ ವ್ಯವಸ್ಥಾಪಕರು ಹಾಗೂ ಗ್ರಾಮದ ಜನಪ್ರತಿನಿಧಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande