ಬೆಂಗಳೂರು, 31 ಜುಲೈ (ಹಿ.ಸ.) :
ಆ್ಯಂಕರ್ : ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿಯೇ ಚುನಾವಣಾ ಅಕ್ರಮ ಮಾಡಿದ್ದಾರೆ ಎಂದು ನ್ಯಾಯಾಲಯದಲ್ಲಿ ಸಾಬೀತಾಗಿತ್ತು. ರಾಹುಲ್ ಗಾಂಧಿ ಆಗಸ್ಟ್ 5 ಕ್ಕೆ ರಾಜ್ಯಕ್ಕೆ ಬರುವುದೇ ದೊಡ್ಡ ನಾಟಕ. ಇಲ್ಲಿ ಸರ್ಕಾರ ನಡೆಯುತ್ತಿಲ್ಲ. ಅದರ ಬದಲು ಮುಖ್ಯಮಂತ್ರಿ ಕುರ್ಚಿಗಾಗಿ ಕಲಹ ನಡೆಯುತ್ತಿದೆ. ಅದನ್ನು ಮರೆಮಾಚಲು ಚುನಾವಣಾ ಅಕ್ರಮದ ವಿಷಯ ಪ್ರಸ್ತಾಪ ಮಾಡಲಾಗಿದೆ ಎಂದರು.
ಚುನಾವಣೆ ನಡೆದಾಗ ನ್ಯಾಯಾಲಯದ ಮೊರೆ ಹೋಗದೆ ಇಷ್ಟು ವರ್ಷವಾದ ಬಳಿಕ ಆರೋಪ ಮಾಡಲಾಗುತ್ತಿದೆ. ಅಭಿವೃದ್ಧಿ ಶೂನ್ಯತೆಯನ್ನು ಮರೆಮಾಚಲು ಈ ರೀತಿ ಮಾಡಲಾಗುತ್ತಿದೆ. ಸಾಕ್ಷಿ ಇದ್ದರೆ ನ್ಯಾಯಾಲಯದ ಮೊರೆ ಹೋಗುತ್ತಿದ್ದರು. ಸಾಕ್ಷಿ ಇಲ್ಲವೆಂದೇ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಇಂತಹ ಅಧಿಕಾರಿ ಮಾಡಿದ್ದಾರೆ ಎಂದು ನಿರ್ದಿಷ್ಟವಾಗಿ ತಿಳಿಸಲಿ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa