ಮತಗಳ್ಳತನ ವಿರುದ್ದ ಆ.೫ರಂದು ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, 31 ಜುಲೈ (ಹಿ.ಸ.) : ಆ್ಯಂಕರ್ : ಮತದಾರರ ಹಕ್ಕು, ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ಆಗಸ್ಟ್‌ 5ರಂದು ಮತ ಕಳ್ಳತನದ ವಿರುದ್ಧ ಹೋರಾಟ ಹಮ್ಮಿಕೊಂಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್‌ ಉಸ್
Dks


ಬೆಂಗಳೂರು, 31 ಜುಲೈ (ಹಿ.ಸ.) :

ಆ್ಯಂಕರ್ : ಮತದಾರರ ಹಕ್ಕು, ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ಆಗಸ್ಟ್‌ 5ರಂದು ಮತ ಕಳ್ಳತನದ ವಿರುದ್ಧ ಹೋರಾಟ ಹಮ್ಮಿಕೊಂಡಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಪ್ರತಿಭಟನೆ ನಡೆಯುವ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿ ನಂತರ ಮಾತನಾಡಿದರು.

ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande