ಸರ್ಕಾರದ ಯೋಜನೆಗಳ ಲಾಭ ಪಡೆದ ಫಲಾನುಭವಿಗಳ ಮಾಹಿತಿ ಒದಗಿಸಲು ಡಿಸಿ ಡಾ.ಆನಂದ ಕೆ.ಸೂಚನೆ
ವಿಜಯಪುರ, 31 ಜುಲೈ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿಗಳ ಸ್ವನಿಧಿ, ಮಾತೃವಂಧನ, ಡೇನಲ್ಮ್ ಹಾಗೂ ಸರ್ಕಾರದ ಇತರೆ ಯೋಜನೆಗಳ ಲಾಭ ಪಡೆದ ಫಲಾನುಭವಿಗಳ ಸಮಗ್ರವಾದ ನಿಖರ ಮಾಹಿತಿಯನ್ನು ಮುಂದಿನ ಸಭೆಯೊಳಗಾಗಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚಿಸಿದರು. ಗುರುವಾರ
ಡಿಸಿ


ವಿಜಯಪುರ, 31 ಜುಲೈ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿಗಳ ಸ್ವನಿಧಿ, ಮಾತೃವಂಧನ, ಡೇನಲ್ಮ್ ಹಾಗೂ ಸರ್ಕಾರದ ಇತರೆ ಯೋಜನೆಗಳ ಲಾಭ ಪಡೆದ ಫಲಾನುಭವಿಗಳ ಸಮಗ್ರವಾದ ನಿಖರ ಮಾಹಿತಿಯನ್ನು ಮುಂದಿನ ಸಭೆಯೊಳಗಾಗಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚಿಸಿದರು.

ಗುರುವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಯುವನಿಧಿ ಯೊಜನೆಯಡಿ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಅಂತಿಮ ವರ್ಷದಲ್ಲಿ ಪಧವಿ ಹಾಗೂ ಡಿಪೆÇ್ಲೀಮಾ ಪಾಸಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪಡೆದು ಎಲ್ಲ ಅರ್ಹ ಫಲಾನುಭವಿಗಳಿಗೆ ಯುವನಿಧಿ ಯೋಜನೆ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಯೋಜನೆಗಳ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಅಮೃತ್ ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳು ವಿವಿಧ ವೃತ್ತಿಪರ ಚಟುವಟಿಕೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರತಿಯೊಂದು ಗುಂಪಿಗೆ ಒಂದು ಹೆಸರನ್ನು ಸೂಚಿಸಬೇಕು ಅದರಂತೆ ಸ್ವ ಸಹಾಯ ಗುಂಪಿನ ಎಲ್ಲ ಸದಸ್ಯರುಗಳಿಗೆ ಸುರಕ್ಷತೆ ಒದಗಿಸಲು ಕ್ರಮ ವಹಿಸಬೇಕು. ನಗರದ ಹಿಟ್ನಳ್ಳಿ ಫಾರ್ಮಗಳಲ್ಲಿ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು ರೈತ ಮಕ್ಕಳಿಗಾಗಿ ಕೃಷಿ ಹಂಗಾಮುಗಳ ಅನುಸಾರ ಸುಮಾರು 40 ಕೃಷಿಕ ರೈತರ ಮಕ್ಕಳಿಗೆ 2 ಸರತಿಯಂತೆ ಒಟ್ಟು 80 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಸಂಖ್ಯೆಯನ್ನು ಹೆಚ್ಚುಗೊಳಿಸಲು ಕ್ರಮ ವಹಿಸಿ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

ವಿಶೇಷವಾಗಿ ಜಿಲ್ಲೆಯ 15 ಸದಸ್ಯರಂತೆ ಸ್ವ ಸಹಾಯ ಗುಂಪುಗಳು ಪೇಂಟಿಗ್ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು ಒಂದು ಉತ್ತಮ ಸಾಧನೆಗೈದಿದ್ದು, ಇಂತಹ ಸ್ವಸಹಾಯ ಗುಂಪುಗಳಿಗೆ ಪ್ರೋತ್ಸಾಹಿಸಬೇಕು. ರುಡ್ ಸೆಟ್ ಸಂಸ್ಥೆ ವತಿಯಿಂದ ಪ್ರತಿ ವರ್ಷ ಬಿಪಿಎಲ್ ಕಾರ್ಡ್ ಹೊಂದಿದ ಗ್ರಾಮೀಣ ಭಾಗದ ಯುವಕ ಹಾಗೂ ಯುವತಿಯರಿಗೆ ವಿವಿಧ ರೀತಿಯ ಕೌಶಲ್ಯ ಆಧಾರಿತ ತರಬೇತಿಗಳನ್ನು ಆಯೋಜಿಸಲಾಗುತ್ತದೆ. ಈ ಮಾದರಿಯಲ್ಲಿಯೇ ನಗರದ ಯುವಕ ಯುವತಿಯರು ತರಬೇತಿ ನೀಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಕುಮಾರ ಮೆಕ್ಕಳಕಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸಿ.ಬಿ ಕುಂಬಾರ, ಉದ್ಯೋಗ ಮತ್ತು ತರಬೇತಿ ಇಲಾಖೆಯ ಅಧಿಕಾರಿಗಳಾದ ಮಹೇಶ ಮಾಳವಾಡೇಕರ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌದಾಗರ, ಡಿಸ್ಟ್ರಿಕ್ಟ್ ಇಂಡಸ್ಟ್ರೀಯಲ್ ಓನರ್ ಅಸೊಷಿಯೇಶನ್ ಅಧ್ಯಕ್ಷರಾದ ಎಸ್.ವಿ ಪಾಟೀಲ, ಜಿಲ್ಲಾ ಕೈಗಾರಿಕಾ ಉದ್ಯಮಿದಾರರ ಸಂಘದ ಅಧ್ಯಕ್ಷರಾದ ಗಂಗಾಧರ ಸಂಬಣ್ಣಿ, ಉದ್ಯಮಿ ಪೀಟರ್ ಅಲೆಕ್ಸಾಂಡರ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande