ಬಳ್ಳಾರಿ, 31 ಜುಲೈ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಕಾಯಕಯೋಗಿ ನುಲಿಯ ಚಂದಯ್ಯ, ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ತಿಳಿಸಿದ್ದಾರೆ.
ಮಹನೀಯರ ಜಯಂತಿ ಆಚರಣೆ ಕುರಿತಂತೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಆ.09 ರಂದು ಕಾಯಕಯೋಗಿ ನುಲಿಯ ಚಂದಯ್ಯ ಮತ್ತು ಆ.16 ರಂದು ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಚರಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆ.09 ರಂದು ಕಾಯಕಯೋಗಿ ನುಲಿಯ ಚಂದಯ್ಯ ಕಾರ್ಯಕ್ರಮವನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮ0ದಿರದಲ್ಲಿ ಆಯೋಜಿಸಲಾಗುವುದು.
ಇದಕ್ಕೂ ಮುನ್ನ ಜಯಂತಿಯ ಮೆರವಣಿಗೆಯು ಕೌಲ್ ಬಜಾರ್ ನ ಕೊರವರ ಬೀದಿಯ ಸಮುದಾಯ ಭವನದ ಆವರಣದಿಂದ ವೇದಿಕೆ ಕಾರ್ಯಕ್ರಮದವರೆಗೂ ನಡೆಯಲಿದೆ.
ಪಾಲಿಕೆ ವತಿಯಿಂದ ಟ್ರಾö್ಯಕ್ಟರ್, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.
ಆ.16 ರಂದು ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ರಾಜ್ ಕುಮಾರ್ ರಸ್ತೆಯ ಬಿಡಿಎಎ ಪುಟ್ ಬಾಲ್ ಮೈದಾನದ ಸಭಾಂಗಣದಲ್ಲಿ ಆಯೋಜಿಸಲಾಗುವುದು. ಬೇಕಾದ ಎಲ್ಲಾ ಸಿದ್ಧತೆ ಕೈಗೊಳ್ಳಬೇಕು. ಜಯಂತಿಯ ಮೆರವಣಿಗೆಯು ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ವೇದಿಕೆ ಕಾರ್ಯಕೆಮದವರೆಗೆ ನಡೆಯಲಿದ್ದು, ಮೆರವಣಿಗೆಗೆ ಸಂಚಾರಕ್ಕೆ ತೊಂದರೆಯು0ಟಾಗದ0ತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲು ಸಂಬ0ಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಮೆರವಣಿಗೆಯಲ್ಲಿ ಎರಡು ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ವೇದಿಕೆ ಕಾರ್ಯಕ್ರಮದಲ್ಲಿ ಮಹನೀಯರ ಚರಿತ್ರೆಯನ್ನು ತಿಳಿಯಪಡಿಸಲು ನುರಿತರಿಂದ ವಿಶೇಷ ಉಪನ್ಯಾಸ, ವಚನ ಗಾಯನ ಸಂಗೀತ ಆಯೋಜಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ ಸದಸ್ಯ ಗಾದೆಪ್ಪ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್