ನವದೆಹಲಿ, 31 ಜುಲೈ (ಹಿ.ಸ.) :
ಆ್ಯಂಕರ್ : ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಮುಂದುವರಿಸಲು ಸಂಬಂಧಿಸಿದ ಪ್ರಸ್ತಾವನೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಲಾಗುತ್ತಿದೆ. ರಾಜ್ಯಸಭೆಯ ಅಧಿಕೃತ ಕಾರ್ಯಸೂಚಿಯ ಪ್ರಕಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಪ್ರಸ್ತಾವನೆಯನ್ನು ಮಂಡಿಸಲಿದ್ದಾರೆ.
ಸಂವಿಧಾನದ 356ನೇ ವಿಧಿಯಡಿ ರಾಷ್ಟ್ರಪತಿಗಳು ಫೆಬ್ರವರಿ 13, 2025ರಂದು ಮಾಡಿದ ಘೋಷಣೆಯನ್ನು ಆಧಾರವನ್ನಾಗಿ ಮಾಡಿಕೊಂಡು, ಆಳ್ವಿಕೆಯನ್ನು ಆಗಸ್ಟ್ 13ರಿಂದ ಮುಂದಿನ ಆರು ತಿಂಗಳವರೆಗೆ ವಿಸ್ತರಿಸಲು ಅನುಮೋದನೆ ಕೋರುತ್ತಿದ್ದಾರೆ. ಈ ಕುರಿತು ಚರ್ಚೆ ನಂತರ ಮತದಾನ ನಡೆಯಲಿದೆ.
ಈಗಾಗಲೇ ಬುಧವಾರ ಲೋಕಸಭೆಯು ಈ ವಿಸ್ತರಣೆಯ ಪ್ರಸ್ತಾವನೆಯನ್ನು ಅಂಗೀಕರಿಸಿದ್ದು, ರಾಜ್ಯಸಭೆಯಲ್ಲೂ ಅಂಗೀಕಾರವಾಗುವ ನೀರಿಕ್ಷೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa