ಬೆಂಗಳೂರು, 31 ಜುಲೈ (ಹಿ.ಸ.) :
ಆ್ಯಂಕರ್ : ಶಾಲೆಗಳು ಪ್ರಾರಂಭವಾಗಿ ಎರಡು ತಿಂಗಳಾದರೂ ಕಾಂಗ್ರೆಸ್ ಸರ್ಕಾರಕ್ಕೆ ಪಠ್ಯಪುಸ್ತಕ ವಿತರಣೆ ಸಾಧ್ಯವಾಗಿಲ್ಲ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ಸರ್ಕಾರಿ ಶಾಲೆಗಳ ಬಗ್ಗೆ ಕಾಳಜಿಯೇ ಇಲ್ಲವಾಗಿದೆ. ಸರ್ಕಾರಿ ಶಾಲೆಗಳನ್ನು ಹೇಳುವವರು ಕೇಳುವವರು ಯಾರೂ ಇಲ್ಲವೆಂಬಂತೆ ಸರ್ಕಾರ ವರ್ತಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶೈಕ್ಷಣಿಕ ವಿಚಾರಗಳನ್ನು ಬಿಟ್ಟು ಬೇರೆಲ್ಲ ವಿಚಾರಗಳ ಬಗ್ಗೆ ಅತೀವ ಆಸಕ್ತಿ ತೋರಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಗುಣಮಟ್ಟದ ಶಿಕ್ಷಣ ಎನ್ನುವುದು ಕನಸಿನ ಮಾತಾಗಿದೆ ಎಂದು ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa