ವಿಜಯಪುರ, 31 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ವಿಜಯಪುರ ಮಹಾನಗರ ಪಾಲಿಕೆಯ ಮೂರು ಕಚೇರಿಗಳಾದ ಜಲನಗರದ ಮುಖ್ಯ ಕಚೇರಿ, ಗಾಂಧಿ ಚೌಕ್ ಹಾಗೂ ಬಡಿಕಮಾನ ಹತ್ತಿರದ ವಲಯ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.
ಇನ್ನು ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ, ಸಾರ್ವಜನಿಕರಿಂದ ಭ್ರಷ್ಟಾಚಾರದ ಆರೋಪಗಳು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande