ಮಾಲೆಗಾಂವ್ ಸ್ಫೋಟ ಪ್ರಕರಣ : ಪ್ರಜ್ಞಾ ಠಾಕೂರ್‌ ಸೇರಿ ಎಲ್ಲ 7 ಆರೋಪಿಗಳು ಖುಲಾಸೆ
ನಾಸಿಕ್, 31 ಜುಲೈ (ಹಿ.ಸ.) : ಆ್ಯಂಕರ್ : 2008ರ ಮಹಾರಾಷ್ಟ್ರದ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ 7 ಆರೋಪಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಇಂದು ಖುಲಾಸೆಗೊಳಿಸಿದೆ. ಸೆಪ್ಟೆಂಬರ
Release


ನಾಸಿಕ್, 31 ಜುಲೈ (ಹಿ.ಸ.) :

ಆ್ಯಂಕರ್ : 2008ರ ಮಹಾರಾಷ್ಟ್ರದ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ 7 ಆರೋಪಿಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಇಂದು ಖುಲಾಸೆಗೊಳಿಸಿದೆ.

ಸೆಪ್ಟೆಂಬರ್ 29, 2008 ರಂದು ನಾಸಿಕ್ ಜಿಲ್ಲೆ ಮಾಲೆಗಾಂವ್‌ನ ಮಸೀದಿಯ ಬಳಿ ಸ್ಫೋಟ ಸಂಭವಿಸಿ 6 ಮಂದಿ ಮೃತಪಟ್ಟಿದ್ದರು ಮತ್ತು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಪ್ರಾಥಮಿಕ ತನಿಖೆಯನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ನಡೆಸಿದ್ದರೂ, 2011ರಲ್ಲಿ ಎನ್‌ಐಎ ತನಿಖೆ ವಹಿಸಿಕೊಂಡಿತ್ತು. 2018ರಲ್ಲಿ ಆರಂಭವಾದ ವಿಚಾರಣೆ 2025ರ ಏಪ್ರಿಲ್‌ನಲ್ಲಿ ಪೂರ್ಣಗೊಂಡಿದ್ದು, ಇದೀಗ ನ್ಯಾಯಾಲಯವು ಸಾಕ್ಷ್ಯಗಳ ಕೊರತೆಯಿಂದಾಗಿ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande