ಕೂಕನೂರ : ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶ ಅವಧಿ ವಿಸ್ತರಣೆ
ಕೂಕನೂರ, 31 ಜುಲೈ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕೂಕನೂರ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 9ನೇ ತರಗತಿಗೆ ಮತ್ತು 11ನೇ ತರಗತಿಗಳಲ್ಲಿ ಖಾಲಿಯಿರುವ ಸ್ಥಾನಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದ್ದು, ಅವಧಿಯನ್ನು ಸೆಪ್ಟೆಂಬರ್ 23ರ ವರೆಗೆ ವಿಸ್ತರಿಸಲಾ
ಕೂಕನೂರ : ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶ ಅವಧಿ ವಿಸ್ತರಣೆ


ಕೂಕನೂರ, 31 ಜುಲೈ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕೂಕನೂರ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 9ನೇ ತರಗತಿಗೆ ಮತ್ತು 11ನೇ ತರಗತಿಗಳಲ್ಲಿ ಖಾಲಿಯಿರುವ ಸ್ಥಾನಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದ್ದು, ಅವಧಿಯನ್ನು ಸೆಪ್ಟೆಂಬರ್ 23ರ ವರೆಗೆ ವಿಸ್ತರಿಸಲಾಗಿದೆ.

ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಜವಾಹರ ನವೋದಯ ವಿದ್ಯಾಲಯದಲ್ಲಿ ಖಾಲಿಯಿರುವ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದ್ದು, ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ (9ನೇ ತರಗತಿ ಪ್ರವೇಶಕ್ಕೆ) https://cbseitms.nic.in/2025/nvsix_9/ ನಲ್ಲಿ & (11ನೇ ಪ್ರವೇಶಕ್ಕೆ) https://https://cbseitms.nic.in/2025/nvsix_11 ನಲ್ಲಿ ಸೆ. 23ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪ್ರವೇಶ ಪರೀಕ್ಷೆಯು 2026ರ ಫೆಬ್ರವರಿ 7 ರಂದು ನಡೆಯಲಿದೆ ಎಂದು ಕೂಕನೂರ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande