ಕೊಪ್ಪಳ, 31 ಜುಲೈ (ಹಿ.ಸ.) :
ಆ್ಯಂಕರ್ : ಪಿಎಂ-ಅಭಿಮ್ ಅಡಿಯಲ್ಲಿನ ನಮ್ಮ ಕ್ಲಿನಿಕ್ ಹಾಗೂ ಎನ್.ಹೆಚ್.ಎಂ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ನಾನಾ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ನಾನಾ ಹುದ್ದೆಗಳಿಗೆ ಸಂಬಂಧಿಸಿದಂತೆ ತಿರಸ್ಕೃತಗೊಂಡ ಹಾಗೂ ಅಂಗೀಕರಿಸಲ್ಪಟ್ಟ ಅರ್ಜಿಗಳ ವಿವರ ಮತ್ತು ತಾತ್ಕಾಲಿಕ ಆಯ್ಕೆಪಟ್ಟಿಯ ವಿವರಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕೊಪ್ಪಳ ಕಚೇರಿಯ ಸೂಚನಾ ಫಲಕಕ್ಕೆ ಹಾಗೂ ಕೊಪ್ಪಳ ಜಿಲ್ಲಾ ವೆಬ್ ತಾಣ www.koppal.nic.in ನಲ್ಲಿ ಪ್ರಕಟಿಸಲಾಗಿದೆ.
ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 6 ರೋಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಗೆ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ನಂತರ ಬಂದ ಆಕ್ಷೇಪಣೆಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್