ವಿಜಯಪುರ, 31 ಜುಲೈ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದ್ರಾಕ್ಷಿ ಬೆಳೆಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದ್ದು, ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ ಕಾರ್ಡ ಪ್ರತಿ ಹಾಗೂ ಬ್ಯಾಂಕ್ ಪಾಸ್‌ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕಗಳಲ್ಲಿ, ಗ್ರಾಮ ಒನ್ ಕೇಂದ್ರ ಅಥವಾ ಸಿಎಸ್ ಸಿ ಸೆಂಟರ್ ಗಳಲ್ಲಿ ವಿಮಾ ಯೋಜನೆಯಡಿ ನೊಂದಾಯಿಸಿಕೊಳ್ಳಬಹುದು.
ಮುಂಗಾರು ಹಂಗಾಮಿನಲ್ಲಿ ದ್ರಾಕ್ಷಿ ಬೆಳೆಯ ವಿಮಾ ನೋಂದಣಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ.ರೈತರು ಪಾವತಿಸಬೇಕಾದ ವಿಮಾ ಮೊತ್ತ ಪ್ರತಿ ಹೆಕ್ಟರ್ ಗೆ 14,000ರೂ. ಗಳಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಮ್ಮವ್ಯಾಪ್ತಿಯ ತಾಲೂಕಿನ ತೋಟಗಾರಿಕೆ ಇಲಾಖೆ,
ಅಗ್ರಿಕಲ್ಚರ ಇನ್ಸುರೆನಸ್ ಕಂಪನಿ (ಎಐಸಿ) ವಿಮಾ ಸಂಸ್ಥೆಯ ಪ್ರತಿನಿಧಿ ರಾಮನಗೌಡ ಬಿರಾದಾರ ಮೊ. 8310939753, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: 9535185999, ಇಂಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: 9008404041, ಸಿಂದಗಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: 7795952653, ಬಸವನ ಬಾಗೇವಾಡಿ ಜಿಲ್ಲಾ ಪಂಚಾಯತಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ: 9845215362 ಹಾಗೂ ಮುದ್ದೇಬಿಹಾಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮೊ: 9620578551 ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande