ಶಂಕರ ಮಾರಿಹಾಳಗೆ ಸೇವಾ ನಿವೃತ್ತಿ ಸಮಾರಂಭ
ವಿಜಯಪುರ, 31 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶಂಕರ ಮಾರಿಹಾಳ ಅವರ ಸೇವಾ ನಿವೃತ್ತಿ ಸಮಾರಂಭ ವಿಜಯಪುರ ನಗರದ ಕಂದಗಲ್ ಹಣಮಂತರಾಯ್ ರಂಗಮಂದಿರದಲ್ಲಿ ನಡೆಯಿತು. ವಿಜಯಪುರ ಜಿಲ್ಲೆಯಲ್ಲಿ ಅಪರಾಧ ತಡೆಗಟ್ಟಲು ಶಂಕರ ಮಾರಿಹಾಳ ಅವರು ಹಲವು ಕೊಡುಗೆಗಳನ್ನು ನೀಡಿದ್ದಾರೆ.
ಪೊಲೀಸ್


ವಿಜಯಪುರ, 31 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶಂಕರ ಮಾರಿಹಾಳ ಅವರ ಸೇವಾ ನಿವೃತ್ತಿ ಸಮಾರಂಭ ವಿಜಯಪುರ ನಗರದ ಕಂದಗಲ್ ಹಣಮಂತರಾಯ್ ರಂಗಮಂದಿರದಲ್ಲಿ ನಡೆಯಿತು.

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ತಡೆಗಟ್ಟಲು ಶಂಕರ ಮಾರಿಹಾಳ ಅವರು ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅಲ್ಲದೇ, ಜನಸಾಮಾನ್ಯರಂತೆ ಜನತೆಯೊಂದಿಗೆ ಬೆರೆತು ಸಮಾಜಕ್ಕೆ ಅಭಿವೃದ್ಧಿಯ ಕೆಲಸವನ್ನು ಮಾಡಿದ್ದಾರೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಎಸ್ಪಿ ಲಕ್ಷ್ಮಣ ನಿಂಬರಗಿ ವಹಿಸಿದ್ದರು. ಈ ವೇಳೆ ಗಣ್ಯರು, ಹಿರಿಯ, ಕಿರಿಯ ಪೊಲೀಸ ಅಧಿಕಾರಿಗಳು ಮಾರಿಹಾಳ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಲೋಕಾಯುಕ್ತ ಎಸ್ಪಿ ಟಿ.‌ಮಲ್ಲೇಶ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಮನಗೌಡ ಹಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande