ಬೆಂಗಳೂರು, 31 ಜುಲೈ (ಹಿ.ಸ.) :
ಆ್ಯಂಕರ್ : ಕ್ಷೇತ್ರ ಅಭಿವೃದ್ಧಿ, ನೀಡಿರುವ ಅನುದಾನ ಸೇರಿದಂತೆ ಹಲವು ವಿಚಾರಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸುತ್ತಿರುವ ಸಭೆ ಇಂದು ಕೂಡ ಮುಂದುವರೆಯಿತು. ಇಂದು ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ ಜಿಲ್ಲಾ ಶಾಸಕರೊಂದಿಗೆ ಮುಖ್ಯಮಂತ್ರಿ ಸಮಾಲೋಚನೆ ನಡೆಸಿದರು.
ವಿಧಾನ ಸೌಧದ ತಮ್ಮ ಕೊಠಡಿಯಲ್ಲಿ ಸಭೆ ನಡೆಸಿದ ಸಿದ್ದರಾಮಯ್ಯ, ಆಯಾ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಸಚಿವರು, ಶಾಸಕರೊಂದಿಗೆ ಅಭಿವೃದ್ಧಿ ಕಾರ್ಯ ಸೇರಿದಂತೆ ಕ್ಷೇತ್ರದ ಸ್ಥಿತಿಗತಿಗಳ ಕುರಿತು ಮಾಹಿತಿ ಪಡೆದರು.
ನಾಳೆಯು ಮುಖ್ಯಮಂತ್ರಿ ಉಳಿದ ಜಿಲ್ಲೆಗಳ ಶಾಸಕರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa