ಬೆಂಗಳೂರು, 31 ಜುಲೈ (ಹಿ.ಸ.) :
ಆ್ಯಂಕರ್ : ಕೆಎಂಎಫ್ ಅಧ್ಯಕ್ಷ ಗಾದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ, ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಣ ಕಣ್ಣಿಟ್ಟಿದೆ. ಕಾಂಗ್ರೆಸ್ ಒಳಜಗಳ ಇದೀಗ ಮತ್ತೊಮ್ಮೆ ಬೀದಿಗೆ ಬರಲು ವೇದಿಕೆ ಸಿದ್ಧವಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಡಿ.ಕೆ. ಶಿವಕುಮಾರ್ ಸಹೋದರನಿಗೆ ಕೆಎಂಎಫ್ ಪಟ್ಟ ಕಟ್ಟಲು ತೆರೆಮರೆಯ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಬಣ ಬಡಿದಾಟ ಇದಕ್ಕೆ ಅಡ್ಡಿಯಾಗುವ ಲಕ್ಷಣಗಳು ಕಾಣುತ್ತಿದೆ. ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಡಿಕೆಶಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿದೆ.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಬಣ ಬಡಿದಾಟದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಎಂಬುದೇ ಮರೀಚಿಕೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa