ಟ್ರಂಪ್ ಸುಂಕ ನಿರ್ಣಯ : ರಾಷ್ಟ್ರದ ಹಿತಾಸಕ್ತಿಯಲ್ಲಿ ರಾಜಿ ಬೇಡ-ಮಾಯಾವತಿ
ಲಕ್ನೋ, 31 ಜುಲೈ (ಹಿ.ಸ.) : ಆ್ಯಂಕರ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಸ್ಟ್ 1ರಿಂದ ಭಾರತೀಯ ಆಮದಿಗೆ ಶೇಕಡಾ 25ರಷ್ಟು ಸುಂಕ ಹೇರಲು ನಿರ್ಧರಿಸಿರುವ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಕೇಂದ್ರ ಸರ್ಕಾರ ಯಾವುದೇ ರಾಜಿ
Mayawati


ಲಕ್ನೋ, 31 ಜುಲೈ (ಹಿ.ಸ.) :

ಆ್ಯಂಕರ್ : ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಸ್ಟ್ 1ರಿಂದ ಭಾರತೀಯ ಆಮದಿಗೆ ಶೇಕಡಾ 25ರಷ್ಟು ಸುಂಕ ಹೇರಲು ನಿರ್ಧರಿಸಿರುವ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಕೇಂದ್ರ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು , ಭಾರತ ಬಡವರು ಮತ್ತು ಶ್ರಮಿಕ ಜನರಿಂದ ಕೂಡಿರುವ ದೇಶವಾಗಿದ್ದು, ಸ್ವಾವಲಂಬನೆಯ ಆಧಾರದ ಮೇಲೆ ದೇಶವನ್ನು ಮುನ್ನಡೆಸುವ ನೀತಿ ರೂಪಿಸಬೇಕು ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande