ಬೆಂಗಳೂರು, 31 ಜುಲೈ (ಹಿ.ಸ.) :
ಆ್ಯಂಕರ್ : ಲೋಕ ಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದ ಮಹದೇವಪುರ ಮತ್ತು ರಾಜಾಜಿನಗರದಲ್ಲಿ
ಮತಗಳ್ಳತನ ಆಗಿರುವ ಬಗ್ಗೆ ಲೋಕ ಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಹಿಲ್ಟನ್ ಹೋಟೆಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಕುರಿತು ರಾಹುಲ್ ಗಾಂಧಿ ಬಳಿ ಸಂಪೂರ್ಣ ಸಾಕ್ಷಿ ಇದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 4 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆ ನಂತರ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಭೇಟಿಯಾಗಿ ದೂರು ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa