ಮೈಸೂರು, 04 ಜುಲೈ (ಹಿ.ಸ.) :
ಆ್ಯಂಕರ್ : ಆಷಾಢ ಮಾಸದ ಶುಕ್ರವಾರದ ವಿಶೇಷ ಹಿನ್ನೆಲೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ತಮ್ಮ ಕುಟುಂಬ ಸಮೇತ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದರು. ಪತ್ನಿ ಉಷಾ ಅವರೊಂದಿಗೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದರ್ಶನದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ತಮ್ಮದೇ ಶೈಲಿಯಲ್ಲಿ ಪ್ರಯತ್ನ ವಿಫಲವಾದರೂ, ಪ್ರಾರ್ಥನೆ ವಿಫಲವಾಗಲ್ಲ ಎಂದು ಹೇಳಿದ್ದಾರೆ.
ನನಗೆ ಬೇಕಾಗಿರುವುದನ್ನು ದೇವರ ಬಳಿ ಪ್ರಾರ್ಥಿಸಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರು ನಮಗೆ ಬುದ್ಧಿವಾದ ನೀಡಿದ್ದಾರೆ. ಹೈಕಮಾಂಡ್ ಕೂಡ ಕೆಲ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa