ಕೊಪ್ಪಳ, 04 ಜುಲೈ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ/ಕೆಎಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ ತರಬೇತಿ ಮತ್ತು ಕೆಪಿಎಸ್‍ಸಿ ಗ್ರೂಪ್-ಸಿ ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ತರಬೇತಿ ನೀಡಲಾಗುತ್ತದೆ. ಈ ತರಬೇತಿಗೆ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ವೆಬ್‍ಪೋರ್ಟಲ್ https://sevasindhu.karnataka.gov.in ನಲ್ಲಿ ಆಗಸ್ಟ್ 2 ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ ಯುಪಿಎಸ್‍ಸಿ/ಕೆಎಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ ತರಬೇತಿ ಮತ್ತು ಕೆಪಿಎಸ್‍ಸಿ ಗ್ರೂಪ್-ಸಿ ತರಬೇತಿಗೆ ಕನಿಷ್ಠ 21 ಹಾಗೂ ಗರಿಷ್ಠ 35 ವರ್ಷಗಳು ಮತ್ತು ಆರ್‍ಆರ್‍ಬಿ ಮತ್ತು ಎಸ್‍ಎಸ್‍ಸಿ ತರಬೇತಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 30 ಮೀರಿರಬಾರದು (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ). ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಹಿಂದಿನ ಸಾಲಿನಲ್ಲಿ ಐಎಎಸ್/ಕೆಎಎಸ್ ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.
ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ https://dom.karnataka.gov.in ಹಾಗೂ ಸಹಾಯವಾಣಿ: 8277799990 ಗೆ ಕರೆಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 8088894549, ಗಂಗಾವತಿ: 9986244408, ಕುಷ್ಟಗಿ: 8880482486, ಯಲಬುರ್ಗಾ: 8095191406 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್