ಬಳ್ಳಾರಿ, 04 ಜುಲೈ (ಹಿ.ಸ.) :
ಆ್ಯಂಕರ್ : ಸೌಹಾರ್ದ ಕೋ ಆಪರೇಟಿವ್ ಸೊಸೈಟಿಗಳು ಜನಸಾಮಾನ್ಯರ ಆರ್ಥಿಕತೆಗೆ ಸಹಕಾರ ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ತಿಳಿಸಿದ್ದಾರೆ.
ನಗರದಲ್ಲಿ ನೂತನವಾಗಿ ಪ್ರಾರಂಭವಾಗಿರುವ `ಶಶಿಕಿರಣ ಕ್ರೆಡಿಟ್ ಸೌಹಾರ್ದ ಕೋ-ಅಪರೇಟಿವ್ ಸೊಸೈಟಿ'ಯ ಶಾಖೆಯನ್ನು ಶುಕ್ರವಾರ ಉದ್ಘಾಟಿಸಿ, ಸಹಕಾರ ಕ್ಷೇತ್ರವು ಕರ್ನಾಟಕದಲ್ಲಿ ಬಲವಾಗಿ ಬೇರೂರುತ್ತಿದೆ. ಈ ಹಿನ್ನಲೆಯಲ್ಲಿ ಸಹಕಾರಿಗಳು ಮತ್ತು ಸಹಕಾರ ಬ್ಯಾಂಕ್‍ಗಳು ಬಡ ಜನರ - ಸಣ್ಣ ವ್ಯಾಪಾರಿಗಳ ಹಿತಾಸಕ್ತಿಯನ್ನು ಕಾಪಾಡಲು ಆದ್ಯತೆ ನೀಡಬೇಕು ಎಂದರು.
ಬಳ್ಳಾರಿ ಶಾಖೆಯ ಸಲಹಾ ಸಮಿತಿಯ ಅಧ್ಯಕ್ಷ ಕುಮಾರಸ್ವಾಮಿ ನಾಗರಾಜ್ ಅವರು, ಸಾರ್ವಜನಿಕರ ಮತ್ತು ಗ್ರಾಹಕರ ಸಹಕಾರದಲ್ಲಿ ಈ ಶಾಖೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದರು.
ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ, ಪಾಲಿಕೆಯ ಸದಸ್ಯರಾದ ಶ್ರೀನಿವಾಸ ಮಿಂಚು, ವಿ. ಕುಬೇರ, ಮುಖಂಡರಾದ ದೇವಿನಗರ ಮೊಹ್ಮದ್, ಮಾಜಿ ಮೇಯರ್ ಎಂ. ರಾಜೇಶ್ವರಿ, ಮುಖಂಡರಾದ ಎಂ. ಸುಬ್ಬರಾಯುಡು, ಬಿ.ಆರ್.ಎಲ್. ಸೀನಾ ಸೇರಿ ಬ್ಯಾಂಕ್‍ನ ಉಪಾಧ್ಯಕ್ಷ ನಿರಂಜನ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್