ವಿಜಯಪುರ, 04 ಜುಲೈ (ಹಿ.ಸ.) :
ಆ್ಯಂಕರ್ : ಟ್ರಾಫಿಕ್ ಸಮಸ್ಯೆ ಸೇರಿದಂತೆ ಕ್ರೈಂಗಳನ್ನು ತಡೆಗಟ್ಟಲು ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಹೇಳಿದರು.
ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣಾ ಆವರಣದಲ್ಲಿ ಟೋಯಿಂಗ್ ವ್ಯಾನ್‌ಗೆ ಚಾಲನೆ ನೀಡಿ ಮಾತನಾಡಿದರು.
ವಿಜಯಪುರ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಟೋಯಿಂಗ್ ವ್ಯಾನ್ ಕಾರ್ಯನಿರ್ವಹಿಸುತ್ತದೆ. ಎಲ್ಲೆಂದರಲ್ಲಿ ಬೈಕ್, ಕಾರು ನಿಲ್ಲಿಸಿದರೆ ಅಂತಹವರ ವಿರುದ್ಧ ಟ್ರಾಫಿಕ್ ಪೊಲೀಸರು ಕ್ರಮಕೊಳ್ಳುತ್ತಾರೆ. ಅಲ್ಲದೇ, ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆಯಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್‌ಗೆ ಒತ್ತು ನೀಡಿದೆ. ಇದರಲ್ಲಿ ಹೈಟೆಕ್ ಸಿಸಿಟಿವಿ ಸೇರಿದಂತೆ ಎಲೆಕ್ಟ್ರಾನಿಕ್ ಅಳವಡಿಸಿ ಕ್ರೈಂಗಳನ್ನು ತಡೆಗಟ್ಟಲು ಸಹಾಯ ಆಗುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande