ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಗದಗ, 04 ಜುಲೈ (ಹಿ.ಸ.) : ಆ್ಯಂಕರ್ : ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಜುಲೈ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ: ಜುಲೈ 5 ರಂದು ಬೆಳ
ಪೋಟೋ


ಗದಗ, 04 ಜುಲೈ (ಹಿ.ಸ.) :

ಆ್ಯಂಕರ್ : ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಜುಲೈ 5 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ:

ಜುಲೈ 5 ರಂದು ಬೆಳಿಗ್ಗೆ 9 ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 12, ಎಸ್.ಎಮ್. ಕೃಷ್ಣ ನಗರದಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ ಪ್ರತ್ಯಕ್ಷ ಆನ್‌ಲೈನ್ ಹಾಜರಾತಿ ಕಾರ್ಯಕ್ರಮ ಉದ್ಘಾಟಿಸುವರು. ಬೆಳಿಗ್ಗೆ 9.30 ಗಂಟೆಗೆ ನಗರದ ಹಾತಲಗೇರಿ ನಾಕಾ , ಪತ್ತಾರ ಕಾಂಪ್ಲೇಕ್ಸ್, ನೂತನ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 10 ಗಂಟೆಗೆ ನಗರದ ಸೋಮೇಶ್ವರ ರಸ್ತೆಯಲ್ಲಿ ಗದಗಿನ ರಾಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವರು. ಬೆಳಿಗ್ಗೆ 10.30 ಗಂಟೆಗೆ ಮಲ್ಲಸಮುದ ಗ್ರಾಮದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಮಹಾವಿದ್ಯಾಲಯ 2024-25 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿಯಲ್ಲಿ ಶೇ 85 ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 11 ಗಂಟೆಗೆ ಮಲ್ಲಸಮುದ್ರ ಗ್ರಾಮದ ಎಸ್.ಎಚ್.-6 ರಾಜ್ಯ ಹೆದ್ದಾರಿಯಿಂದ ಮಲ್ಲಸಮುದ್ರ ಗ್ರಾಮದಡಿ ಎ.ಆರ್.( ಪೊಲೀಸ್ ಇಲಾಖೆ) ಕ್ಯಾಂಪಸ್ ವರೆಗಿನ ರಸ್ತೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 11.30 ಗಂಟೆಗೆ ಮಲ್ಲಸಮುದ್ರ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12 ಗಂಟೆಗೆ ಮಲ್ಲಸಮುದ್ರದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30 ಗಂಟೆಗೆ ಹರ್ತಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4 ಗಂಟೆಗೆ ನಗರದ ಶ್ರೀ ಭೀಮಸೇನ ಜೋಶಿ ರಂಗಮಂದಿರದಲ್ಲಿ ಗಾಂಧೀಜಿ ಕನಸಿನ ಗ್ರಾಮ ಸ್ವರಾಜ್ಯ ಪರಿಕಲ್ಪನೆಯ ಅನುಷ್ಟಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 7 ಗಂಟೆಗೆ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಸೇವಾ ತಂಡದ ಸಭೆಯಲ್ಲಿ ಪಾಲ್ಗೊಂಡು ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande