ಶಿವಮೊಗ್ಗ, 04 ಜುಲೈ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಂಗನವಾಡಿ ಸೇರಿದಂತೆ ಶಾಲಾ- ಕಾಲೇಜುಗಳಿಗೆ ತಾಲೂಕು ಆಡಳಿತಗಳು ರಜೆ ಘೋಷಿಸಿವೆ.
ಇವು ಮಲೆನಾಡಿನ ತಾಲೂಕುಗಳಾಗಿದ್ದು. ಇಲ್ಲಿ ಪ್ರತಿ ವರ್ಷ ಉತ್ತಮ ಮಳೆ ಆಗುತ್ತದೆ. ತಾಲೂಕಿನ ವಿವಿಧ ಭಾಗಗಳ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಳ್ಳಗಳನ್ನು ದಾಟಿಕೊಂಡು ದೂರದ ಊರುಗಳಿಂದ ಬಸ್ನಲ್ಲಿ ಆಗಮಿಸುವುದರಿಂದ ಅವರಿಗೆ ಅನನುಕೂಲವಾಗಬಾರದು ಎಂಬ ಕಾರಣಕ್ಕೆ ತಾಲೂಕು ಆಡಳಿತಗಳು ತಮ್ಮ ವ್ಯಾಪ್ತಿಯ ಎಲ್ಲ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa