ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ : ಶುಭಮನ್ ಗಿಲ್ ದಾಖಲೆ
ಬರ್ಮಿಂಗ್ಹ್ಯಾಮ್, 04 ಜುಲೈ (ಹಿ.ಸ.) : ಆ್ಯಂಕರ್ : ಭಾರತ ಮತ್ತು ಇಂಗ್ಲೆಂಡ್​ ಟೆಸ್ಟ್​ ಸರಣಿಯ 2ನೇ ಪಂದ್ಯದ ಮೇಲೆ ಭಾರತ ಹಿಡಿತ ಸಾಧಿಸಿದೆ. ಬರ್ಮಿಂಗ್​ಹ್ತಾಮ್​​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 587 ರನ್​ಗಳ ಬೃಹತ್​ ಮೊತ್ತವನ್ನು ಕಲೆಹಾಕಿದೆ. 310 ರನ್​ಗಳೊಂದ
Cricket


ಬರ್ಮಿಂಗ್ಹ್ಯಾಮ್, 04 ಜುಲೈ (ಹಿ.ಸ.) :

ಆ್ಯಂಕರ್ : ಭಾರತ ಮತ್ತು ಇಂಗ್ಲೆಂಡ್​ ಟೆಸ್ಟ್​ ಸರಣಿಯ 2ನೇ ಪಂದ್ಯದ ಮೇಲೆ ಭಾರತ ಹಿಡಿತ ಸಾಧಿಸಿದೆ. ಬರ್ಮಿಂಗ್​ಹ್ತಾಮ್​​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯ ಮೊದಲ ಇನ್ನಿಂಗ್ಸ್​ನಲ್ಲಿ ಭಾರತ 587 ರನ್​ಗಳ ಬೃಹತ್​ ಮೊತ್ತವನ್ನು ಕಲೆಹಾಕಿದೆ.

310 ರನ್​ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಭಾರತ ನಾಯಕ ಶುಭ್​ಮನ್​ ಗಿಲ್, ಜಡೇಜಾ ಮತ್ತು ವಾಷಿಂಗ್ಟನ್​ ಸುಂದರ್​ ಅವರ ಬ್ಯಾಟಿಂಗ್​ ಸಹಾಯದಿಂದ ಈ ದೊಡ್ಡ ಗುರಿ ಸಾಧಿಸಿದೆ. ನಾಯಕ ಶುಭಮನ್ ಗಿಲ್​ ದ್ವಿಶತಕ ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಮೊದಲ ದಿನದಂದು 199 ಎಸೆತಗಳಲ್ಲಿ 11 ಬೌಂಡರಿಗಳ ಸಹಾಯದಿಂದ ಶತಕ ಗಳಿಸಿದ್ದ ಗಿಲ್ ಮೊದಲ ದಿನದ ಆಟದ ಅಂತ್ಯದ ವೇಳೆಗೆ 226 ಎಸೆತಗಳಲ್ಲಿ 12 ಬೌಂಡರಿಗಳ ಸಹಾಯದಿಂದ 114 ರನ್ ಕಲೆಹಾಕಿದ್ದರು. ಎರಡನೇ ದಿನದಂದು, ಗಿಲ್ ತಮ್ಮ ಇನ್ನಿಂಗ್ಸ್ ಆರಂಭಿಸಿ, 311 ಎಸೆತಗಳನ್ನು ಎದುರಿಸಿ 21 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 200 ರನ್‌ಗಳನ್ನು ಪೂರ್ಣಗೊಳಿಸಿದರು.

ಒಟ್ಟಾರೆ ತಮ್ಮ ಇನ್ನಿಂಗ್ಸ್​ನಲ್ಲಿ 387 ಎಸೆತಗಳಲ್ಲಿ 30 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ ಬರೋಬ್ಬರಿ 269 ರನ್ ಗಳಿಸಿ ವಿಕೆಟ್​ ಒಪ್ಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande