ಕೋಲಾರ, ೦೪ ಜುಲೈ (ಹಿ.ಸ) :
ಆ್ಯಂಕರ್ : ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದು ಶಾಸಕ ಕೊತ್ತೂರು ಮಂಜುನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ನೀಡಿ ಧನ್ಯವಾದ ತಿಳಿಸಿ ಮುಂಬರುವ ದಿನಗಳಲ್ಲಿ ಕೋಲಾರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಚರ್ಚೆ ಮಾಡಿದರು
ಸಂಪುಟ ಸಭೆಯಲ್ಲಿ ನಗರದ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ೪೦ ಕೋಟಿ, ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ೨೦ ಕೋಟಿ, ಅಂತರಗAಗೆ ಬೆಟ್ಟದಿಂದ ಕೋಲಾರಮ್ಮ ಸರೋವರದವರೆಗಿನ ಕಾಲುವೆ ಅಭಿವೃದ್ಧಿಗೆ ೯೦ ಕೋಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗಾಂಧಿ ಭವನ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಇಲಾಖೆಯಿಂದ ಉಚಿತ ಭೂಮಿ, ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿ ನಿಲಯದ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಇಲಾಖೆಯಿಂದ ಉಚಿತ ಭೂಮಿ ಸೇರಿದಂತೆ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು ೧೫೦ ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.
ಚಿತ್ರ : ಕೋಲಾರ ಅಭಿವೃದ್ಧಿಗೆ ಹೆಚ್ಚುವರಿ ಅನಧಾನ ಬಿಡುಗಡೆ ಮಾಡಲು ಸಚಿವರ ಸಂಪುಟದಲ್ಲಿ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಕೃತಜ್ಞತೆ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್