ಮಂಗಳೂರು, 04 ಜುಲೈ (ಹಿ.ಸ.) :
ಆ್ಯಂಕರ್ : ಮಕ್ಕಳಲ್ಲಿ ಡ್ರಗ್ಸ್ ವ್ಯಸನ ಬೆಳೆಯುತ್ತಿದೆ ಎಂಬ ಪೋಷಕರ ದೂರು ಆಧರಿಸಿ ಮಂಗಳೂರು ಸೆನ್ ಕ್ರೈಂ ಠಾಣೆ ಪೊಲೀಸರು ಡ್ರಗ್ಸ್ ಪೂರೈಕೆ ಜಾಲವೊಂದನ್ನು ಪತ್ತೆಹಚ್ಚಿ ಐವರನ್ನು ಬಂಧಿಸಿದ್ದಾರೆ. ಪಡುಶೆಡ್ಡೆ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರಿನ ತುಷಾರ್ (21), ಧನ್ವಿ ಶೆಟ್ಟಿ (20), ಸಾಗರ್ ಕರ್ಕೇರಾ (19), ವಿಕಾಸ್ ಥಾಪ (23) ಮತ್ತು ವಿಘ್ನೇಶ್ ಕಾಮತ್ (24) ಬಂಧಿತರು.
ಈ ತಂಡ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ ₹5.20 ಲಕ್ಷ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾವನ್ನು ₹1000ಕ್ಕೆ ಪ್ಯಾಕೆಟ್ ಆಗಿ ಮಾರಾಟ ಮಾಡುತ್ತಿದ್ದರು. ಪೋಷಕರ ಜಾಗೃತಿ ಹಾಗೂ ಪೊಲೀಸರ ಕಾರ್ಯಚಟುವಟಿಕೆ ಪರಿಣಾಮ ಡ್ರಗ್ಸ್ ಪೂರೈಕೆ ಜಾಲಕ್ಕೆ ಕಡಿವಾಣ ಹಾಕಲಾಗಿದೆ.
ಮಕ್ಕಳಲ್ಲಿ ವ್ಯಸನ ಲಕ್ಷಣ ಕಂಡುಬಂದರೆ ತಕ್ಷಣ ಮಾಹಿತಿ ನೀಡಬೇಕು. ಖಚಿತ ಮಾಹಿತಿ ನೀಡಿದರೆ ಮಂಗಳೂರಿನಲ್ಲಿ ಡ್ರಗ್ಸ್ ಸಂಪೂರ್ಣವಾಗಿ ನಿರ್ಮೂಲನೆ ಮಾಡಬಹುದಾಗಿದೆ ಎಂದು ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa