ಜುಲೈ 7ರಂದು ಫೋನ್ ಇನ್ ಕಾರ್ಯಕ್ರಮ
ರಾಯಚೂರು, 04 ಜುಲೈ (ಹಿ.ಸ.) : ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದಲ್ಲಿ ಸಾರಿಗೆ ಸೌಲಭ್ಯ ಕುರಿತು ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ
ಜುಲೈ 7ರಂದು ಫೋನ್ ಇನ್ ಕಾರ್ಯಕ್ರಮ


ರಾಯಚೂರು, 04 ಜುಲೈ (ಹಿ.ಸ.) :

ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದಲ್ಲಿ ಸಾರಿಗೆ ಸೌಲಭ್ಯ ಕುರಿತು ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಜುಲೈ 7 ರಂದು ಮಧ್ಯಾಹ್ನ 04 ರಿಂದ 05 ರವರೆಗೆ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಾರ್ವಜನಿಕ ಪ್ರಯಾಣಿಕರು, ವಿದ್ಯಾರ್ಥಿಗಳು ಬಸ್‍ನ ಸೌಲಭ್ಯ ಹಾಗೂ ಕುಂದುಕೊರತೆ ಸಲಹೆಗಳಿದ್ದಲ್ಲಿ ದೂರವಾಣಿ ಸಂಖ್ಯೆ: 6366423883ಗೆ ಸಂಪರ್ಕಿಸಬಹುದಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande