ಜು.5 ರಿಂದ 12 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-3 : ನಿಷೇಧಾಜ್ಞೆ ಜಾರಿ
ಹೊಸಪೇಟೆ, 04 ಜುಲೈ (ಹಿ.ಸ.) : ಆ್ಯಂಕರ್ : ಎಸ್ಸೆಸ್ಸೆಲ್ಸಿ ಪರೀಕ್ಷೆ-3 ಜಿಲ್ಲೆಯಾದ್ಯಂತ ಜು.5 ರಿಂದ 12 ರವರೆಗೆ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಸುಗಮ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾ ದಂಡಾಧಿಕಾರಿ ಎಂ.ಎಸ್.ದಿವಾಕರ್ ಆದೇಶಿಸಿದ
ಜು.5 ರಿಂದ 12 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-3 : ನಿಷೇಧಾಜ್ಞೆ ಜಾರಿ


ಹೊಸಪೇಟೆ, 04 ಜುಲೈ (ಹಿ.ಸ.) :

ಆ್ಯಂಕರ್ : ಎಸ್ಸೆಸ್ಸೆಲ್ಸಿ ಪರೀಕ್ಷೆ-3 ಜಿಲ್ಲೆಯಾದ್ಯಂತ ಜು.5 ರಿಂದ 12 ರವರೆಗೆ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಸುಗಮ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾ ದಂಡಾಧಿಕಾರಿ ಎಂ.ಎಸ್.ದಿವಾಕರ್ ಆದೇಶಿಸಿದ್ದಾರೆ.

ನಿಗಧಿಪಡಿಸಿರುವ ಪರೀಕ್ಷಾ ಕೇಂದ್ರಗಳ ಸುತ್ತಲೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮತ್ತು ಪರೀಕ್ಷೆಗಳಲ್ಲಿ ನಡೆಯಬಹುದಾದ ಅವ್ಯವಹಾರಗಳನ್ನು ತಡೆಗಟ್ಟುವ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಆದೇಶಿಸಿದೆ. ಹಾಗೂ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತ ನಿರ್ಬಂಧಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರ ಹಾಗೂ ಆವರಣದಲ್ಲಿ ಕಡ್ಡಾಯವಾಗಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande