ಬಳ್ಳಾರಿ, 04 ಜುಲೈ (ಹಿ.ಸ.) :
ಆ್ಯಂಕರ್ : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜು.11 ರಂದು ಬೆಳಿಗ್ಗೆ 10 ಗಂಟೆಗೆ ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ “ಯುವ ಸೌರಭ” ಕಾರ್ಯಕ್ರಮ ಆಯೋಜಿಸಲಾಗಿದೆ.
ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‍ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕಂಪ್ಲಿ ಎಮ್ಮಿಗನೂರಿನ ಜ್ಞಾನೇಶ್ವರ ತಂಡದಿಂದ ಸುಗಮ ಸಂಗೀತ, ಬಳ್ಳಾರಿಯ ನಟರಾಜ ಕುಚುಪುಡಿ ನೃತ್ಯ-ಸಂಗೀತ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಸಮೂಹ ನೃತ್ಯ, ಸಂಡೂರು ತಾಲ್ಲೂಕಿನ ವಿ.ನಾಗಲಾಪುರದ ಶರಣಬಸವ.ಹೆಚ್ ಅವರ ಜಾನಪದ ಗೀತೆ, ಸಿರಿಗೇರಿಯ ಎನ್.ಮಣಿಕಂಠ ಸಂಗಡಿಗರಿಂದ ಬಯಲಾಟ(ಭಾರ್ಗವ ರಾಮ), ಬಳ್ಳಾರಿಯ ಎಂ.ಎಸ್.ಹರ್ಷ ತಂಡದಿಂದ ತಾಷರಂಡೋಲ್, ಸಂಡೂರು ತಾಲ್ಲೂಕಿನ ಎಂ.ಬಸಾಪುರದ ಆರ್.ನಾಗರಾಜ ತಂಡದಿಂದ ಡೊಳ್ಳು ಕುಣಿತ ಸೇರಿದಂತೆ ಇತರೆ ಸಾಂಸ್ಕøತಿಕ ಕಾರ್ಯಕ್ರಮಗಳು ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್