ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೀದರ್, 05 ಜುಲೈ (ಹಿ.ಸ.) : ಆ್ಯಂಕರ್ : ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ವಿಷಯವನ್ನು ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೀದರ್ ಜಿಲ್ಲಾ ಪಂಚಾಯತ್ ಸ
Lakshmi


ಬೀದರ್, 05 ಜುಲೈ (ಹಿ.ಸ.) :

ಆ್ಯಂಕರ್ : ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ವಿಷಯವನ್ನು ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಕ್ಕಳಿಗೆ ನೀಡಲಾಗುವ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಎರಡು ದಿನ ಬೀದರ್ ನಲ್ಲಿ ಕಲಬುರಗಿ ವಿಭಾಗ ಮಟ್ಟದ ಅಧಿಕಾರಗಳ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅನುದಾನದಡಿ ಹಲವು ಯೋಜನೆಗಳು ನಡೆಯುತ್ತಿದ್ದು., ಯೋಜನೆಗಳು ಜನರಿಗೆ ತಲುಪುವಂತೆ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ಹೇಳಿದರು.

* *20 ಭಾಗ್ಯಲಕ್ಷ್ಮಿ ಬಾಂಡ್ ಫಲಾನುಭವಿಗಳಿಗಾಗಿ ಶೋಧ*

ಈಗಾಗಲೇ ಭಾಗ್ಯಲಕ್ಷ್ಮಿ ಬಾಂಡ್ ಪಡೆದ 1.60ಲಕ್ಷ ಜನರ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ವಿಳಾಸ ಪತ್ತೆಯಾಗಿಲ್ಲ.‌ ಇಂಥವರು ತಮ್ಮ ಸಮೀಪದ ನಮ್ಮ ಕಚೇರಿಗೆ ಬಂದು ಭೇಟಿಯಾಗಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.

ಈ ಭಾಗದ ಏಳು ಜಿಲ್ಲೆಗಳ ಆಗು ಹೋಗುಗಳ ಬಗ್ಗೆ ಚರ್ಚಿಸಿದ್ದು, . 35 ಲಕ್ಷ ಮಕ್ಕಳು ನಿತ್ಯ ನಮ್ಮ ಅಂಗನವಾಡಿ ಕೇಂದ್ರಕ್ಕೆ ಬರುತ್ತಿದ್ದಾರೆ.‌

ಎಲ್ಲಾ ಮಕ್ಕಳಿಗೆ ಗುಣಮಟ್ಟದ ಆಹಾರ ಸರಬರಾಜು ಮಾಡಲಾಗುತ್ತದೆ.

ಇಲಾಖೆಯಲ್ಲಿ ಸಾಕಷ್ಟು ಯೋಜನೆಗಳಿದ್ದು, ಜನರಿಗೆ ತಿಳಿವಳಿಕೆ ಮೂಡಿಸಲು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಅಂಗನವಾಡಿ ನೇಮಕಾತಿ ವಿಳಂಬವಾಗದಂತೆ ಮತ್ತು ಹೆಚ್ಚು ಪಾರದರ್ಶಕವಾಗಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಗರಿಷ್ಠ 90 ದಿನಗಳಲ್ಲಿ ನೇಮಕಾತಿ ಪೂರ್ಣಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ, ಅಧಿಕಾರಿಗಳು ಹೆಚ್ಚು ಕಾಳಜಿಯಿಂದ ಕೆಲಸ ಮಾಡಬೇಕು. ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಬೇಕು ಎಂದು ತಿಳಿಸಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಈ ಭಾಗದಲ್ಲಿ ಗೃಹ ಲಕ್ಷ್ಮೀ ಯೋಜನೆಯಲ್ಲಿ 10 ಸಾವಿರ ಕೋಟಿ ರೂ ನೀಡಲಾಗಿದೆ. ಯಾರಿಗೂ ಯೋಜನೆ ಕೈ ತಪ್ಪದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಗೃಹ ಲಕ್ಷ್ಮೀ ಸಂಘಗಳ ಮೂಲಕ ಇನ್ನೂ ಹೆಚ್ಚಿನ ಪ್ರಯೋಜನವಾಗುವಂತೆ ಹೇಗೆ ಮಾಡಬಹುದು ಎನ್ನುವ ಚಿಂತನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಬೀದರ್ ಪೊಲೀಸ್ ಇಲಾಖೆಯ ಅಕ್ಕ ಪಡೆ ಉತ್ತಮವಾಗಿ ಕೆಲಸ ಮಾಡುತ್ತಿದೆ.

ಬೇರೆ ಜಿಲ್ಲೆಗಳಲ್ಲೂ ಇದೇ ಮಾದರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande