ಜು. 7 ರಂದು ಶಿಕ್ಷಣ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ
ಕೊಪ್ಪಳ, 05 ಜುಲೈ (ಹಿ.ಸ.) : ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಜುಲೈ 7ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟ ಗ್ರಾಮದ ನೂತನ ಸ
ಜು. 7 ರಂದು ಶಿಕ್ಷಣ ಸಚಿವರ ಕೊಪ್ಪಳ ಜಿಲ್ಲಾ ಪ್ರವಾಸ


ಕೊಪ್ಪಳ, 05 ಜುಲೈ (ಹಿ.ಸ.) :

ಆ್ಯಂಕರ್ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಜುಲೈ 7ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟ ಗ್ರಾಮದ ನೂತನ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 12ಕ್ಕೆ ಹುಲೇಗುಡ್ಡ ಗ್ರಾಮದ ಮತ್ತು 2 ಗಂಟೆಗೆ ದ್ಯಾಂಪುರ ಗ್ರಾಮದ ನೂತನ ಸರ್ಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಚಿವರು ಅಲ್ಲಿಂದ ಗದಗ ಜಿಲ್ಲೆಯ ಕಡೆಗೆ ಪ್ರಯಾಣ ಬೆಳಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande